ಇಸ್ಲಾಮಾಬಾದ್: ತನ್ನ ಎಚ್ಚರಿಕೆ ಮೀರಿಯೂ ಟಿಕ್‌ಟಾಕ್‌ನಲ್ಲಿ ವೀಡಿಯೋ (TikTok Video) ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳನ್ನೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
28 ವರ್ಷಗಳ ಹಿಂದೆ ಅಮೆರಿಕದಲ್ಲಿ (America) ನೆಲೆಸಿದ್ದ ವ್ಯಕ್ತಿ ಇತ್ತೀಚೆಗಷ್ಟೇ ತನ್ನ ಕುಟುಂಬವನ್ನು ಪಾಕಿಸ್ತಾನಕ್ಕೆ (Pakistan) ಕರೆತಂದಿದ್ದ. ತನ್ನ ಎಚ್ಚರಿಕೆ ಹೊರತಾಗಿಯೂ ಮಗಳು ವಿಡಿಯೋ ಪೋಸ್ಟ್ ಮಾಡುವುದನ್ನು ಮುಂದುವರಿಸಿದ್ದಳು. ಇದರಿಂದ ಗುಂಡಿಕ್ಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ
Advertisement
Advertisement
ಟಿಕ್ ಟಾಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಕ್ಕಾಗಿ ಆಕೆಯ ಅಪ್ಪ, ಚಿಕ್ಕಪ್ಪ ಸೇರಿ ಗುಂಡಿಕ್ಕಿ ಕೊಂದಿದ್ದಾರೆ. ಸದ್ಯ ಆರೋಪಿಯನ್ನು ಮರ್ಯಾದಾ ಹತ್ಯೆ ಆರೋಪದ ಅಡಿಯಲ್ಲಿ ಪೊಲೀಸರು ಬಂದಿಸಿದ್ದು, 10 ದಿನ ಕಸ್ಟಡಿಗೆ ಪಡೆದಿದ್ದಾರೆ. ಇದನ್ನೂ ಓದಿ: U-19 Women’s T20 World Cup: ಇಂಗ್ಲೆಂಡ್‌ಗೆ ಮಣ್ಣು ಮುಕ್ಕಿಸಿ ಫೈನಲ್‌ಗೆ ಟೀಂ ಇಂಡಿಯಾ ಲಗ್ಗೆ
Advertisement
Advertisement
ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಮೃತ ಬಾಲಕಿಯ ಕಿರಿಯ ಸಹೋದರನನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ಅಮೆರಿಕದಲ್ಲಿ ಕಠಿಣ ಕಾನೂನುಗಳು ಇರುವ ಹಿನ್ನೆಲೆ ಹುಡುಗಿಯನ್ನು ಕೊಲ್ಲುವುದಕ್ಕಾಗಿಯೇ ಆರೋಪಿ ತಂದೆ ಪಾಕಿಸ್ತಾನಕ್ಕೆ ಕರೆದುಕೊಂಡು ಬಂದಿದ್ದನೇ ಅನ್ನೋ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.