ನವದೆಹಲಿ: ಭಾರತಕ್ಕೆ ನಾಲ್ಕು ದಿನ ಪ್ರವಾಸ ಕೈಗೊಂಡಿರುವ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ (JD Vance) ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಸೋಮವಾರ ಭೇಟಿಯಾದರು.
ಅಮೆರಿಕ-ಚೀನಾ ವ್ಯಾಪಾರ ಯುದ್ಧದ ಬಗ್ಗೆ ಜಗತ್ತು ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಉಭಯ ನಾಯಕರು ಭೇಟಿಯಾಗಿ ಸಭೆ ನಡೆಸಿದರು. ಭಾರತ ಮತ್ತು ಅಮೆರಿಕ ಎರಡೂ ರಾಷ್ಟ್ರಗಳಿಗೆ ಪ್ರಯೋಜನಕಾರಿಯಾದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವ ಮಾತುಕತೆಗಳು ನಡೆದವು.
Pleased to welcome US @VP @JDVance and his family in New Delhi. We reviewed the fast-paced progress following my visit to the US and meeting with President Trump. We are committed to mutually beneficial cooperation, including in trade, technology, defence, energy and… pic.twitter.com/LRNmodIZLB
— Narendra Modi (@narendramodi) April 21, 2025
ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತಾದ ಮಾತುಕತೆಗಳಲ್ಲಿ ಆಗಿರುವ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಸ್ವಾಗತಿಸಿದ್ದಾರೆ ಎಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಟ್ರಂಪ್ ಆಡಳಿತವು ಭಾರತದೊಂದಿಗಿನ ತನ್ನ ಸಂಬಂಧವನ್ನು ಪ್ರಮುಖ ಆದ್ಯತೆಯಾಗಿ ಇರಿಸಿದೆ. ವಿಶ್ವದ ಅತಿದೊಡ್ಡ ಸರಕು ಉತ್ಪಾದಕ ರಾಷ್ಟ್ರವಾದ ಚೀನಾದೊಂದಿಗಿನ ವ್ಯಾಪಾರ ಯುದ್ಧದ ಹೊಡೆತವನ್ನು ಸ್ವಲ್ಪಮಟ್ಟಿಗೆ ತಗ್ಗಿಸಬಹುದಾದ ವ್ಯಾಪಾರ ಒಪ್ಪಂದವನ್ನು ಜಾರಿಗೆ ತರಲು ಉತ್ಸುಕವಾಗಿದೆ ಎಂದು ಶ್ವೇತಭವನ ಹೇಳಿದೆ. ಶರತ್ಕಾಲದ ವೇಳೆಗೆ ವ್ಯಾಪಾರ ಒಪ್ಪಂದವನ್ನು ನಿರೀಕ್ಷಿಸಲಾಗಿತ್ತು. ಆದರೆ ಜುಲೈ ಅಂತ್ಯದ ವೇಳೆಗೆ ಪೂರ್ಣಗೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ಭಾರತದ ನಾಯಕರು ಹೇಳಿದ್ದಾರೆ.