ವಾಷಿಂಗ್ಟನ್: ಮಾಸ್ಕೋದಲ್ಲಿ ನಡೆದ ಉಗ್ರರ ದಾಳಿಯ (Moscow Attack) ಬಗ್ಗೆ ಅಮೆರಿಕ ಮೊದಲೇ ರಷ್ಯಾಗೆ ಎಚ್ಚರಿಸಿತ್ತು. ಮಾರ್ಚ್ ತಿಂಗಳ ಆರಂಭದಲ್ಲಿಯೇ ರಷ್ಯಾದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತ್ತು ಎಂದು ಶ್ವೇತಭವನದ (White House) ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಅಡ್ರಿಯೆನ್ ವ್ಯಾಟ್ಸನ್ ತಿಳಿಸಿದ್ದಾರೆ.
We strongly condemn the heinous terrorist attack in Moscow. Our thoughts and prayers are with the families of the victims. India stands in solidarity with the government and the people of the Russian Federation in this hour of grief.
— Narendra Modi (@narendramodi) March 23, 2024
Advertisement
ಮಾಸ್ಕೋದಲ್ಲಿ ಶುಕ್ರವಾರ ತಡರಾತ್ರಿ ನಡೆದ ಉಗ್ರರ ದಾಳಿಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 115ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ವೇತಭವನದ ವಕ್ತಾರ, ಯುಎಸ್ ಸರ್ಕಾರಕ್ಕೆ ಮಾಸ್ಕೋದಲ್ಲಿ ನಡೆದ ಯೋಜಿತ ಉಗ್ರರ ದಾಳಿಯ ಬಗ್ಗೆ ಒಂದು ತಿಂಗಳ ಮೊದಲೇ ಗೊತ್ತಿತ್ತು. ಈ ಮಾಹಿತಿಯನ್ನು ರಷ್ಯಾದ ಸರ್ಕಾರದೊಂದಿಗೆ (Russia Government) ಹಂಚಿಕೊಳ್ಳಲಾಗಿತ್ತು. ದೇಶದ ಅನೇಕ ಜನರನ್ನು ಕೊಲ್ಲುವ ಅಥವಾ ಅಪಹರಿಸುವ ಬಗ್ಗೆ ಗುಪ್ತಚರ ಮಾಹಿತಿಯನ್ನು ರವಾನಿಸಿತ್ತು ಎಂದು ವ್ಯಾಟ್ಸನ್ ತಿಳಿಸಿದ್ದಾರೆ. ಅಲ್ಲದೇ ಈ ಕೃತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ಸ್‌ಗಳ (Islamic State) ಕೈವಾಡವಿದೆ ಎಂದು ಹೇಳಿದ್ದಾರೆ.
Advertisement
Advertisement
ಕನ್ಸರ್ಟ್ ಹಾಲ್‌ನಲ್ಲಿ ಏನಾಯಿತು?
4 ಮಂದಿ ಭಯೋತ್ಪಾದಕರ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಕನ್ಸರ್ಟ್ ಹಾಲ್‌ಗೆ ನುಗ್ಗಿತು ಮತ್ತು ಅಲ್ಲಿ ನೆರೆದಿದ್ದ ಸಭಿಕರ ಮೇಲೆ ಗುಂಡಿನ ದಾಳಿ ನಡೆಸಿತು. ಇದರಿಂದ ಜನ ಗಾಬರಿಯಾಗಿ ದಿಕ್ಕಾಪಾಲಾಗಿ ಓಡಲು ಶುರುಮಾಡಿದಾಗ ಕಾಲ್ತುಳಿತ ಕೂಡ ಉಂಟಾಯಿತು, ಇದೇ ಸಂದರ್ಭದಲ್ಲಿ ಉಗ್ರರು ಗ್ರೆನೇಡ್‌ಗಳನ್ನು ಸ್ಫೋಟಿಸಿದರು. ದಾಳಿಕೋರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು. ಗ್ರೆನೇಡ್‌ಗಳನ್ನು ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡು ಉರಿಯತೊಡಗಿತು. ಈ ವೇಳೆ ದಾಳಿಕೋರರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ರಷ್ಯಾದಲ್ಲಿ ನಡೆದ ಭೀಕರ ದಾಳಿ ಖಂಡಿಸಿದ ಪ್ರಧಾನಿ ಮೋದಿ
Advertisement
ಭಾರತ ತೀವ್ರ ಖಂಡನೆ:
ಮಾಸ್ಕೋದ ಮೇಲಿನ ಈ ದಾಳಿಯನ್ನು ಭಾರತ, ಐರೋಪ್ಯ ರಾಷ್ಟ್ರಗಳ ಒಕ್ಕೂಟ, ಫ್ರಾನ್ಸ್, ಸ್ಪೇನ್ ಮತ್ತು ಇಟಲಿ ಮತ್ತಿತರ ದೇಶಗಳು ದಾಳಿಯನ್ನು ಖಂಡಿಸಿವೆ. ಅಮೆರಿಕ ಈ ದಾಳಿಯನ್ನು ಭಯಾನಕ ಎಂದು ಕರೆದಿದೆ. ಅಲ್ಲದೇ ಉಕ್ರೇನ್ ಮೇಲಿನ ರಷ್ಯಾ ದಾಳಿಗೂ ಇದಕ್ಕೂ ಯಾವುದೇ ಸಂಬಂಧ ಕಂಡುಬರುತ್ತಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ರಷ್ಯಾದಲ್ಲಿ ಉಗ್ರರ ಅಟ್ಟಹಾಸ- 70ಕ್ಕೂ ಹೆಚ್ಚು ಮಂದಿ ದುರ್ಮರಣ