ವಾಷಿಂಗ್ಟನ್: ಶ್ವೇತಭವನದ ಬಳಿ ನಡೆದ ಗುಂಡಿನ ದಾಳಿ ನಂತರ ಅಮೆರಿಕ ಡೊನಾಲ್ಡ್ ಟ್ರಂಪ್, 3ನೇ ಜಗತ್ತಿನ ದೇಶಗಳಿಂದ ವಲಸೆಯನ್ನು ಶಾಶ್ವತವಾಗಿ ನಿಲ್ಲಿಸುವುದಾಗಿ ಘೋಷಿಸಿದ್ದಾರೆ.
ಶ್ವೇತಭವನದ ಗುಂಡಿನ ದಾಳಿ ಘಟನೆಯ ನಂತರ ವಲಸೆಯ ವಿರುದ್ಧ ವ್ಯಾಪಕ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಯವಸ್ಥೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಅನುವು ಮಾಡಿಕೊಡಲು ಎಲ್ಲಾ 3ನೇ ವಿಶ್ವ ದೇಶಗಳಿಂದ ವಲಸೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. ಅಫ್ಘಾನಿಸ್ತಾನ ಸೇರಿ 19 ದೇಶಗಳ ಜನರ ಗ್ರೀನ್ ಕಾರ್ಡ್‍ಗಳನ್ನು ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಶ್ವೇತಭವನದ ಬಳಿ ಗುಂಡಿನ ದಾಳಿ – ಓರ್ವ ಭದ್ರತಾ ಸಿಬ್ಬಂದಿ ಸಾವು: ಟ್ರಂಪ್ ಘೋಷಣೆ
ಇನ್ನೂ ದಾಳಿ ನಡೆಸಿದವನು 29 ವರ್ಷದ ಅಫ್ಘಾನ್ ಪ್ರಜೆಯಾಗಿದ್ದಾನೆ. ಈ ಹಿಂದೆ ಅಫ್ಘಾನಿಸ್ತಾನದಲ್ಲಿ ಅಮೆರಿಕದ ಪಡೆಗಳೊಂದಿಗೆ ಕೆಲಸ ಮಾಡಿದ್ದ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹಿಂದಿನ ಜೋ ಬೈಡನ್ ಆಡಳಿತವನ್ನು ಟೀಕಿಸಿದ ಟ್ರಂಪ್, ವಲಸೆ ನೀತಿಯು ತಾಂತ್ರಿಕ ಪ್ರಗತಿ ಮತ್ತು ಹಲವರ ಜೀವನ ಪರಿಸ್ಥಿತಿಗಳ ಲಾಭಗಳನ್ನು ಕುಂಠಿತಗೊಳಿಸಿದೆ ಎಂದು ಹೇಳಿದ್ದಾರೆ.
19 ದೇಶಗಳ ಪಟ್ಟಿಯಲ್ಲಿ ಅಫ್ಘಾನಿಸ್ತಾನ, ಮಯನ್ಮಾರ್, ಚಾಡ್, ಕಾಂಗೋ ಗಣರಾಜ್ಯ, ಈಕ್ವಟೋರಿಯಲ್ ಗಿನಿಯಾ, ಎರಿಟ್ರಿಯಾ, ಹೈಟಿ, ಇರಾನ್, ಲಿಬಿಯಾ, ಸೊಮಾಲಿಯಾ, ಸುಡಾನ್, ಯೆಮೆನ್, ಬುರುಂಡಿ, ಕ್ಯೂಬಾ, ಲಾವೋಸ್, ಸಿಯೆರಾ ಲಿಯೋನ್, ಟೋಗೊ, ತುರ್ಕಮೆನಿಸ್ತಾನ್ ಮತ್ತು ವೆನೆಜುವೆಲಾ ಸೇರಿವೆ. ಈ ಎಲ್ಲಾ ದೇಶಗಳ ಗ್ರೀನ್ ಕಾರ್ಡ್‍ಗಳನ್ನು ಮರುಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಶ್ವೇತಭವನದ ಬಳಿ ಗುಂಡಿನ ದಾಳಿ – ಆ ಪ್ರಾಣಿ ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್ ಎಚ್ಚರಿಕೆ

