ನ್ಯೂಯಾರ್ಕ್: ಮಹಿಳೆಯೊಬ್ಬರು ಮೀನು ತಿಂದು ತನ್ನ ದೇಹದ ನಾಲ್ಕು ಅಂಗಗಳನ್ನು ಕಳೆದುಕೊಂಡಿರುವ ದಾರುಣ ಘಟನೆಯೊಂದು ಕ್ಯಾಲಿಫೋರ್ನಿಯಾದಲ್ಲಿ (California) ನಡೆದಿದೆ.
ಲಾರಾ ಬರಾಜಾಸ್ (40) ಅವರು ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.
Advertisement
Advertisement
ಬ್ಯಾಕ್ಟೀರಿಯಾ ಸೋಂಕಿನಿಂದ ಮಹಿಳೆ (Woman lost Limbs) ಅಂಗಾಂಗ ಕಳೆದುಕೊಂಡಿರುವುದಾಗಿ ವರದಿಯಾಗಿದೆ. ಬ್ಯಾಕ್ಟೀರಿಯಾದ ಮಾರಣಾಂತಿಕ ಸ್ಟ್ರೈನ್‍ನಿಂದ ಕಲುಷಿತಗೊಂಡಿರುವ ಕಡಿಮೆ ಬೇಯಿಸಿದ ತಿಲಾಪಿಯಾ ಮೀನಿನ (Fish) ಸೇವನೆಯಿಂದ ಉಂಟಾಗುತ್ತದೆ ಎನ್ನಲಾಗಿದೆ. ಇದನ್ನೂ ಓದಿ;
Advertisement
ಬರಾಜಸ್ ಅವರು ಸ್ಥಳೀಯ ಮಾರುಕಟ್ಟೆಯಲ್ಲಿ ಮೀನು ಖರೀದಿಸಿದ್ದಾರೆ. ಆ ಮೀನಿನ ಸಾಂಬರ್ ತಿಂದ ಬಳಿಕ ಅವರು ಅಸ್ವಸ್ಥಗೊಂಡಿದ್ದಾರೆ. ಬಹುತೇಕ ಪ್ರಾಣವನ್ನೇ ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದ ಬರಾಜಸ್ ನನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇಡಲಾಗಿತ್ತು. ಕ್ರಮೇಣ ಅವರ ಬೆರಳುಗಳು, ಪಾದಗಳು, ತುಟಿಗಳು ಕಪ್ಪು ಬಣ್ಣಕ್ಕೆ ತಿರುಗುತ್ತಾ ಬಂದವು. ಮೂತ್ರಪಿಂಡಗಳು ಸಂಪೂರ್ಣ ವಿಫಲವಾಗಿವೆ ಎಂದು ಮೆಸ್ಸಿನಾ ಮಾಹಿತಿ ನೀಡಿದ್ದಾರೆ.
Advertisement
ಮೆಸ್ಸಿನಾ ಅವರ ಪ್ರಕಾರ, ಸಾಮಾನ್ಯವಾಗಿ ಸಮುದ್ರದ ನೀರಿನಲ್ಲಿ ಕಂಡುಬರುವ ಸಂಭಾವ್ಯ ಮಾರಣಾಂತಿಕ ಬ್ಯಾಕ್ಟೀರಿಯ ‘ವಿಬ್ರಿಯೊ ವಲ್ನಿಫಿಕಸ್’ ಬರಜಾಸ್ ಅವರ ಸಮಸ್ಯೆಗೆ ಕಾರಣವಾಗಿದೆ ಎಂದಿದ್ದಾರೆ. ಇಂತಹ ತೀವ್ರತರವಾದ ಆರೋಗ್ಯದ ಅಪಾಯಗಳನ್ನು ತಪ್ಪಿಸಲು ಸಮುದ್ರಾಹಾರ, ಮೀನುಗಳನ್ನು ಸರಿಯಾಗಿ ತಯಾರಿಸುವ ಮತ್ತು ಸೇವಿಸುವ ಬಗ್ಗೆ ಜಾಗೃತಿ ವಹಿಸಬೇಕು. ಕಲುಷಿತವಾಗಿರುವ ಏನನ್ನಾದರೂ ತಿನ್ನುವ ಮೂಲಕ ಅಥವಾ ಬ್ಯಾಕ್ಟೀರಿಯಾ ಹೊಂದಿರುವ ನೀರು ಕುಡಿಯುವ ಮೂಲಕ ಇಂತಹ ಬ್ಯಾಕ್ಟೀರಿಯಾ ಸೋಂಕಿಗೆ ತುತ್ತಾಗುವ ಅಪಾಯ ಹೆಚ್ಚಾಗಿದೆ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ. ನತಾಶಾ ಸ್ಪಾಟ್ಟಿಸ್ವುಡ್ ಕ್ರೋನ್‍ಗೆ ಹೇಳಿದ್ದಾರೆ.
Web Stories