ರಾಮನಗದ: ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಕೆರೆಕಟ್ಟೆಗಳು ತುಂಬಿ ರಸ್ತೆಗೆ ಕೋಡಿ ಹರಿದಿದ್ದು, ಮೈಸೂರು-ಬೆಂಗಳೂರಿಗೆ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆ ಮಾರ್ಗಗಳನ್ನು ಸೂಚಿಸಲಾಗಿದೆ.
Advertisement
ಕೆರೆ ಕೋಡಿ ಹರಿದು ಹಲವು ರಸ್ತೆಗಳು ಜಲಾವೃತಗೊಂಡಿವೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಹಲವೆಡೆ ದುಸ್ಥಿತಿಯಾಗಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗಗಳನ್ನು ಬಳಸುವಂತೆ ರಾಮನಗರ ಜಿಲ್ಲಾಡಳಿತ ಮನವಿ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಸ್ತೆ ಗುಂಡಿಯಿಂದಾಗಿ ಬೈಕ್‍ನಿಂದ ಬಿದ್ದು ನರಳಾಡಿದ ಯುವತಿ!
Advertisement
Advertisement
ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರು – ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಬಸ್ ಹಾಗೂ ಇತರೇ ಪ್ರಯಾಣಿಕರು ಬೆಂಗಳೂರು-ಕನಕಪುರ-ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು- ಕುಣಿಗಲ್- ಮೈಸೂರು ಮಾರ್ಗವಾಗಿ ಪ್ರಯಾಣಿಸುವಂತೆ ರಾಮನಗರ ಜಿಲ್ಲಾ ಪೊಲೀಸರು ಸೂಚಿಸಿದ್ದಾರೆ. ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ.