Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ

Bengaluru City

ರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ

Public TV
Last updated: December 27, 2021 8:49 pm
Public TV
Share
3 Min Read
THAVAR CHAND GEHLOT
SHARE

ಬೆಂಗಳೂರು: ಖಾದಿ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ನೇಕಾರರು ತಯಾರಿಸುವ ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ ಖಾದಿ ಧಿರಿಸು ಅಥವಾ ದೇಸಿ ಉಡುಪು ಬಳಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಲಹೆ ನೀಡಿದರು.

THAVAR CHANDH GEHLOT

ಇಂದು ನಗರದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನ-2021 ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಾಮಾಜಿಕ ಮೌಲ್ಯಗಳನ್ನು ಮನದಟ್ಟು ಮಾಡಿಸುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಮಹತ್ವದ್ದಾಗಿರುತ್ತದೆ. ಎಲ್ಲಾ ವಿಶ್ವವಿದ್ಯಾಲಯಗಳು ಸಾಮಾಜಿಕ ವಿಷಯಗಳನ್ನು ಅಧ್ಯಯನ ಮಾಡಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ದೇಸಿ ಉಡುಪು ಬಳಕೆ ಮಾಡುವ ಮೂಲಕ ದೇಶದ ಉತ್ಪನ್ನಗಳಿಗೆ ಉತ್ತೇಜನ ನೀಡಬೇಕು. ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ವಿಶ್ವವಿದ್ಯಾಲಯಗಳಲ್ಲಿ ದಿವ್ಯಾಂಗರಿಗೆ, ಅಶಕ್ತರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು. ಕಾನೂನು ವಿಶ್ವವಿದ್ಯಾಲಯವು ಬಡವರಿಗೆ ಉಚಿತವಾಗಿ ಕಾನೂನಿನ ಸಲಹೆ ನೀಡಲು ಮುಂದಾಗಬೇಕು. ಒಟ್ಟಾರೆ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಜೊತೆ ಜೊತೆಗೆ ಉತ್ತಮ ಪರಿಸರ ನಿರ್ಮಾಣ ಮಾಡುವ ಜವಾಬ್ದಾರಿ ಕುಲಪತಿಗಳದ್ದಾಗಿರುತ್ತದೆ ಎಂದರು. ಇದನ್ನೂ ಓದಿ: ಜ.2ರಂದು ಅನಿವಾಸಿ ಕನ್ನಡಿಗರಿಂದ ಟ್ವಿಟ್ಟರ್, ಇ-ಮೇಲ್ ಅಭಿಯಾನ

ಇಡೀ ದೇಶದಲ್ಲಿ ಉನ್ನತ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಅಗ್ರ ಸ್ಥಾನದಲ್ಲಿದೆ. ಇದಕ್ಕೆ ವಿಶ್ವವಿದ್ಯಾಲಯಗಳ ಕೊಡುಗೆ ಅಪಾರ. ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನದಲ್ಲೂ ಇಡೀ ದೇಶದಲ್ಲಿ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಮತ್ತು ವಿಶ್ವವಿದ್ಯಾಲಯಗಳಿಗೆ ಅಭಿನಂದಿಸುತ್ತೇನೆ ಎಂದರು.

ನಗರದ ಕೆಎಸ್ ಹೆಚ್ಇಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನ-2021ವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ಈ ವೇಳೆ ವಿವಿಧ ವಿವಿ ಕುಲಪತಿಗಳು, ರಿಜಿಸ್ಟ್ರಾರ್ ಗಳು, ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. pic.twitter.com/vnUs5iyd2U

— Thaawarchand Gehlot Office (@TcGehlotOffice) December 27, 2021

ವಿಶ್ವವಿದ್ಯಾಲಯಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದು, ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಶಿಕ್ಷಣ ಅರಿವು ಮೂಡಿಸುವುದು, ಶಿಕ್ಷಣ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳನ್ನು ಕಾರ್ಯರೂಪಗೊಳಿಸುವುದು, ಕರ್ತವ್ಯದ ಜೊತೆಗೆ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನಾಳೆಯಿಂದ ಎರಡು ದಿನ ಕೇಸರಿ ಕಹಳೆ – ಕೆಲ ಸಚಿವರಿಗೆ ಢವಢವ, ಜೆ.ಪಿ.ನಡ್ಡಾ ಬರ್ತಾರಾ..?

ಕೇಂದ್ರ, ರಾಜ್ಯ ಸರ್ಕಾರದ ಜೊತೆ ವಿವಿಗಳು ಕೈಜೋಡಿಸಬೇಕು:

ಯುಜಿಸಿಯ ಮಾರ್ಗಸೂಚಿಗಳ ಆಧಾರದ ಮೇಲೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾರಿಗೊಳಿಸುವಂತೆ ಹಾಗೂ ರಾಜ್ಯಪಾಲರು ಸಭೆಗೆ ಸೂಚಿಸಿದರು. ವಿಶ್ವವಿದ್ಯಾಲಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜೊತೆ ವಿಶ್ವವಿದ್ಯಾಲಯಗಳು ಕೈಜೋಡಿಸಬೇಕು. ವಿಶ್ವವಿದ್ಯಾಲಯದ ಆಡಳಿತಾತ್ಮಕ ಅನುಭವಗಳೊಂದಿಗೆ ಕುಲಪತಿಗಳು ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು. ಉನ್ನತ ಶಿಕ್ಷಣವನ್ನು ಸಮಾಜಕ್ಕೆ ಸಮಾನವಾಗಿ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕಾರ್ಯಪ್ರವೃತ್ತರಾಗಿರಬೇಕು ಎಂದು ತಿಳಿಸಿದರು.

ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಸಾಧ್ಯವಿರುವಂತಹ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಮಸ್ಯೆಗಳನ್ನು ಬಗೆಹರಿಸಬೇಕು. ಸರ್ಕಾರದ ಮಟ್ಟದಲ್ಲಾದರೆ, ಸರ್ಕಾರಕ್ಕೆ ಪತ್ರ ಬರೆದು, ರಾಜ್ಯಪಾಲರಿಗೆ ಪ್ರತಿಯನ್ನು ಸಲ್ಲಿಸಿ. ಕಾನೂನಿನಾತ್ಮಕವಾಗಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು. ಯಾವುದೇ ಸಮಸ್ಯೆಗಳಿದ್ದರೆ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತರುವ ಮೂಲಕ ತ್ವರಿತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ವಿಶ್ವವಿದ್ಯಾನಿಲಯಗಳು ಮತ್ತು ಅವರ ಸಾಧನೆಗಳ ಕುರಿತು, ರಾಷ್ಟ್ರೀಯ ಶಿಕ್ಷಣ ನೀತಿ-2021ರ ಅನುಷ್ಠಾನ, ಅನುಷ್ಠಾನದ ಸಮಯದಲ್ಲಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಸವಾಲುಗಳನ್ನು ಜಯಿಸಲು ವಿಶ್ವವಿದ್ಯಾಲಯಗಳ ಪ್ರಯತ್ನ ಮತ್ತು ಎನ್ ಇಪಿ-2020ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸರ್ಕಾರಕ್ಕೆ ಸಲಹೆಗಳ ಕುರಿತು ಪ್ರಸ್ತುತ ಪಡಿಸಿದರು. ಅಲ್ಲದೇ, ಸಭೆಯಲ್ಲಿ ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ರಾಜ್ಯಪಾಲರ ಭಾಷಣ ಸೇರ್ಪಡೆಗೊಳಿಸಲು ಮತ್ತು ಖಾದಿ ಧಿರಿಸು ಬಳಸಲು ತೀರ್ಮಾನಿಸಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರಾದ ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

TAGGED:karnatakaKhadi AttireThawarchand GehlotUniversity Convocationಥಾವರ್ ಚಂದ್ ಗೆಹ್ಲೋಟ್ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನವಿವಿ ಘಟಿಕೋತ್ಸವದಲ್ಲಿ ಖಾದಿ
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

Bar owner murder case in Chikkamagaluru Four arrested
Chikkamagaluru

ಚಿಕ್ಕಮಗಳೂರು | ಬಾರ್ ಮಾಲೀಕನ ಹತ್ಯೆ ಕೇಸ್ – ನಾಲ್ವರು ಅರೆಸ್ಟ್‌

Public TV
By Public TV
11 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
12 minutes ago
Male Mahadeshwara Hills Two Wheeler Ban
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Public TV
By Public TV
31 minutes ago
supreme Court 1
Court

2000ರಲ್ಲಿ ಕೆಂಪುಕೋಟೆಯಲ್ಲಿ ದಾಳಿ ಕೇಸ್‌; ಎಲ್‌ಇಟಿ ಭಯೋತ್ಪಾದಕ ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Public TV
By Public TV
32 minutes ago
CRIME
Chamarajanagar

ಚಾಮರಾಜನಗರ | ಪತ್ನಿಯೊಂದಿಗೆ ಜಗಳವಾಡಿ ಕತ್ತು ಕೊಯ್ದುಕೊಂಡ ಭೂಪ

Public TV
By Public TV
36 minutes ago
Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?