ಬೆಂಗಳೂರು: ಹಣ್ಣು ತಿನ್ನೋರಿಗೆ ಬಿಗ್ ಶಾಕ್ ಎದುರಾಗಿದೆ. ಮಾವಿನ ಹಣ್ಣು, ಬಾಳೆಹಣ್ಣು ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ (Calcium Carbide) ಬಳಕೆ ಎಫ್‌ಎಸ್‌ಎಸ್‌ಎಐ (FSSAI) ಕಳವಳ ವ್ಯಕ್ತಪಡಿಸಿದೆ.
ಕಾಯಿ ಬೇಗನೆ ಹಣ್ಣಾಗಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡಲಾಗುತ್ತಿರುವ ಆತಂಕದ ವಿಚಾರ ಬಯಲಾಗಿದೆ. ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಯಾಗುತ್ತದೆ. ಚರ್ಮದ ಅಲ್ಸರ್, ವಾಂತಿ, ಗಂಟಲು ನೋವಿನ ಸಮಸ್ಯೆ ಉಲ್ಬಣಗೊಳ್ಳುತ್ತದೆ. ಹೀಗಾಗಿ ಎಫ್‌ಎಸ್‌ಎಸ್‌ಎಐಯಿಂದ ಎಲ್ಲಾ ರಾಜ್ಯದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಹಣ್ಣುಗಳಿಗೆ ಕೆಮಿಕಲ್ ಬಳಕೆಯ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು ಅಂತಾ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ
ಎಲ್ಲಾ ಮಂಡಿ, ವರ್ತಕರು, ಸ್ಟೋರೆಜ್‌ಗಳಿಗೆ ದಾಳಿ ನಡೆಸಿ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

