ನವದೆಹಲಿ: ಜಾರ್ಖಂಡ್‌ನಲ್ಲಿ (Jharkhand) ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ವಿಚಾರಕ್ಕೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi), ತಮ್ಮದೇ ಮೈತ್ರಿಕೂಟ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
झारखंड में विरोध-प्रदर्शन कर रहे छात्रों के ख़िलाफ़ बल का इस्तेमाल ग़लत है।
छात्रों को शांतिपूर्ण विरोध का अधिकार है और बातचीत से ही समाधान निकल सकता है।
झारखंड सरकार को इन छात्रों की बात सुननी चाहिए और हर समस्या का तुरंत समाधान करना चाहिए।
The use of force against students…
— Rahul Gandhi (@RahulGandhi) August 10, 2026
ಎಕ್ಸ್‌ನಲ್ಲಿ ಅವರು ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ತಪ್ಪು. ವಿದ್ಯಾರ್ಥಿಗಳಿಗೆ ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕಿದೆ. ಸಂವಾದ ಮಾತ್ರ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸರ್ಕಾರ ತಕ್ಷಣ ಮಾತುಕತೆ ನಡೆಸಬೇಕು. ಅವರ ಕಳವಳಗಳನ್ನು ಆಲಿಸಬೇಕು. ಈ ಮೂಲಕ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜಾರ್ಖಂಡ್‌ನ ರಾಂಚಿಯಲ್ಲಿ ಇಂದು JPSC ಮತ್ತು JSSC ಪರೀಕ್ಷಾರ್ಥಿಗಳು ನಡೆಸಿದ ವಿಧಾನಸಭೆ ಮುತ್ತಿಗೆ ಚಳವಳಿ ಉಗ್ರ ರೂಪ ಪಡೆದುಕೊಂಡಿದೆ. ಜಾರ್ಖಂಡ್(Jharkhand) ವಿಧಾನಸೌಧದ ಕಡೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಬಳಸಿದ್ದಾರೆ. ಅಲ್ಲದೇ ಲಾಠಿಚಾರ್ಜ್(Lathi Charge) ಮಾಡಿದ್ದರು. ಈ ಸಮಯದಲ್ಲಿ ಅಶ್ರುವಾಯು ಬಳಸಲಾಗಿದೆ ಎಂದು ವರದಿಯಾಗಿದೆ.
ಹಲವಾರು ಪ್ರತಿಭಟನಾಕಾರರಿಗೆ ಗಾಯ
ಲಾಠಿಚಾರ್ಜ್ ಸಮಯದಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿಕ್ರಮ್ ಕುಮಾರ್ ಎಂಬ ಯುವಕ ಮಾತನಾಡಿ, ಹಲವಾರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರ ತಲೆ, ತೋಳುಗಳು ಮತ್ತು ಮುಖಕ್ಕೆ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ.
ಪ್ರತಿಭಟನಾಕಾರ ಜೊತೆ ಮಾತುಕತೆ ನಡೆಸದ ಸರ್ಕಾರ
ಸರ್ಕಾರದಿಂದ ಯಾರೂ ಪ್ರತಿಭಟನಾಕಾರರೊಂದಿಗೆ ಮಾತುಕತೆಗೆ ಮುಂದೆ ಬಂದಿಲ್ಲ ಎಂದು ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹ್ತೋ ಹೇಳಿದ್ದಾರೆ.

