ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ಕಾರ್ಯಕ್ರಮಗಳಲ್ಲೂ ಕನ್ನಡ ಕಡ್ಡಾಯ ಬಳಕೆಗೆ ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ ಪ್ರಾಯೋಜಕತ್ವದ ಕಾರ್ಯಕ್ರಮಗಳಲ್ಲಿ ಕನ್ನಡ ಮಾಯವಾಗುತ್ತಿದೆ ಎನ್ನುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವಂತೆ ಸರ್ಕಾರದಿಂದ ಇಂದು ಸುತ್ತೋಲೆ ಪ್ರಕಟಿಸಿದೆ. ಇದನ್ನೂ ಓದಿ: ಬೊಮ್ಮಾಯಿ ಕಾಂಗ್ರೆಸ್ ದೂಷಿಸಿ ಮೋದಿ ಶಿಷ್ಯರೆನಿಸಿಕೊಳ್ಳಲು ಹೊರಟಿದ್ದಾರೆ – ಕಾಂಗ್ರೆಸ್ ಟೀಕೆ
Advertisement
Advertisement
ಸುತ್ತೋಲೆಯಲ್ಲಿ ಏನಿದೆ?
ಕನ್ನಡವನ್ನು ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ- 1953ರಲ್ಲಿ ಸ್ಪಷ್ಟಪಡಿಸಲಾಗಿದೆ. ಕರ್ನಾಟಕದಲ್ಲಿ ಕನ್ನಡವು ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ. ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುತ್ತದೆ.
Advertisement
Advertisement
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರದಲ್ಲಿ ಆಗಸ್ಟ್ 6ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಬಳಸದಿರುವ ಬಗ್ಗೆ ಪ್ರಸ್ತಾಪಿಸಿದ್ದರು. ಜೊತೆಗೆ ವೇದಿಕೆ ಮೇಲೆ ಅಳವಡಿಸಲಾಗುವ ಪರದೆ, ಫಲಕಗಳು ಸೇರಿದಂತೆ ಒಟ್ಟಾರೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿದ್ದರು. ಇದನ್ನೂ ಓದಿ: ಕೊನೆಗೂ ಫಿಕ್ಸ್ ಆಯ್ತು ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ ಮದುವೆ ದಿನಾಂಕ
ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯ ಅನ್ವಯ, ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದ್ದೆಂದು ಈ ಮೂಲಕ ಸೂಚಿಸಿದೆ ಎಂದು ತಿಳಿಸಿದೆ.