ಬೆಂಗಳೂರು: ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ ಸರ್ಕಾರ ಮೌನವಾಗಿದ್ದು, ಒಳಗೊಳಗೆ ಖುಷಿ ಪಡುತ್ತಿದೆಯಾ? ಎಂದು ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ ಖಾದರ್ ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ದೇಶ ವಿವಿಧತೆಯಲ್ಲಿ ಏಕತೆ ಹೊಂದುರುವ ದೇಶವಾಗಿದೆ. ಇಲ್ಲಿ ಎಲ್ಲಾ ಧರ್ಮೀಯರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಆದರೆ ಕೆಲವರು ಧರ್ಮಗಳ ನಡುವೆ ಕಂದಕವನ್ನ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಎಚ್ಚೆತ್ತುಕೊಳ್ಳದಿದ್ದರೆ ನಮಗೂ ಕಾಶ್ಮೀರಿ ಪಂಡಿತರದ್ದೇ ಪರಿಸ್ಥಿತಿ ಬರಬಹುದು – ಪೇಜಾವರ ಶ್ರೀ ಎಚ್ಚರಿಕೆ
Advertisement
Advertisement
ಕರಾವಳಿ ಭಾಗದಲ್ಲಿ ಕೆಲ ಹಿತಾಸಕ್ತಿಗಳು ಭಿತ್ತಿ ಪತ್ರಗಳನ್ನ ಹಾಕುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸಲು ಹೊರಟಿದ್ದಾರೆ. ಮುಲ್ಕಿ ಸೇರಿದಂತೆ ಕೆಲವೆಡೆ ಭಿತ್ತಿ ಪತ್ರಗಳನ್ನ ಹಾಕಲಾಗಿದೆ. ಇದೊಂದು ಅಸಹ್ಯ ಕೃತ್ಯವಾಗಿದೆ. ಹಿಂದೂ ಸಹೋದರರು ಬೆಂಬಲ ಕೊಡಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಂಚರ್ ಹಾಕಿಲ್ಲ ಅಂದ್ರೆ ಗಾಡಿ ಓಡ್ಸೋದಾದ್ರೂ ಹೇಗೆ : ಡಿಕೆಶಿ ಪ್ರಶ್ನೆ
Advertisement
Advertisement
ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರವಾಗಿ ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದೆ. ಒಳಗೊಳಗೆ ಖುಷಿ ಪಡುತ್ತಿದೆಯಾ? ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆಢಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.