ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಶಾಸಕ (Congress MLA) ಯುಟಿ ಖಾದರ್ (UT Khader) ಸ್ಪೀಕರ್ ಆಗಿ ಆಯ್ಕೆ ಆಗಲಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Randeep Surjewala) ಅವರು ಖಾದರ್ ಅವರಿಗೆ ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್ ಹುದ್ದೆಯನ್ನು ಅಲಂಕರಿಸಬೇಕೆಂದು ಸೂಚನೆ ನೀಡಿದ್ದಾರೆ.
Advertisement
Advertisement
ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ಖಾದರ್ ಈ ಜವಾಬ್ದಾರಿಯನ್ನು ಒಪ್ಪಿಕೊಂಡಿದ್ದು ಇಂದು ಬೆಳಗ್ಗೆ ಸ್ಪೀಕರ್ (Speaker) ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ – ಸಚಿವ ಎಂ.ಬಿ ಪಾಟೀಲ್
Advertisement
ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ನಿರಂತರವಾಗಿ ಆಯ್ಕೆ ಆಗುತ್ತಿರುವ ಖಾದರ್ 2007 ರಿಂದ 2012ರವರೆಗೆ ಖಾದರ್ ವಿಪಕ್ಷ ಶಾಸಕರಾಗಿದ್ದರು. 2013ರಲ್ಲಿ ಸಿದ್ಧರಾಮಯ್ಯ ಸರ್ಕಾರ ಬಂದಾಗ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. 2016ರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ, 2016-18ರವರೆಗೆ ಅವರು ಆಹಾರ, ನಾಗರಿಕ ಪೂರೈಕೆ ಖಾತೆ ನಿಭಾಯಿಸಿದರು.
Advertisement
2018ರಲ್ಲಿ ವಸತಿ, 2018-19ರವರೆಗೆ ನಗರಾಭಿವೃದ್ಧಿ ಖಾತೆಯನ್ನು ನಿಭಾಯಿಸಿದರು. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತ ಖಾದರ್ ಅವರನ್ನು 2022ರಲ್ಲಿ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕರನ್ನಾಗಿ ನೇಮಿಸಲಾಗಿತ್ತು.