CrimeLatestMain PostNational

7ರ ಬಾಲಕಿ ಮೇಲೆ ಅತ್ಯಾಚಾರ- ಹತ್ಯೆಗೈದವರಿಗಾಗಿ ಶೋಧ ಕಾರ್ಯ

Advertisements

ಲಕ್ನೋ: 7 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಮೊರಾದಬಾದ್ ಗ್ರಾಮದಲ್ಲಿ ನಡೆದಿದೆ.

ಡಿಸೆಂಬರ್ 22 ರಂದು ಮನೆಯ ಮುಂದೆ ಆಟವಾಡುತ್ತಿದ್ದಾಗ ಬಾಲಕಿ ಕಾಣೆಯಾಗಿದ್ದಾಳೆ. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ ಮೇರೆಗೆ ಎರಡು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಆದರೆ ಬಾಲಕಿಯ ಯಾವುದೇ ಸುಳಿವು ಎರಡು ತಂಡಕ್ಕೆ ಸಿಕ್ಕಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಪತ್ನಿಯ ಅನೈತಿಕ ಸಂಬಂಧ – ಮನನೊಂದು ರೈಲ್ವೆ ಹಳಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ! 

POLICE JEEP

ಘಟನೆ ನಡೆದ 2 ದಿನದ ಬಳಿಕ ರೈತರೊಬ್ಬರು ತಮ್ಮ ಕಬ್ಬಿನ ಗದ್ದೆಗೆ ಹೋದಂತಹ ಸಂದರ್ಭದಲ್ಲಿ ಕೊಳೆತ ಶವದ ವಾಸನೆ ಬಂದಿದೆ. ಬಳಿಕ ಪೊಲೀಸರಿಗೆ ಶವ ಪತ್ತೆಯಾಗಿರುವ ಮಾಹಿತಿಯನ್ನು ನೀಡಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರವುದು ದೃಢಪಟ್ಟಿದೆ. ಈ ಸಂಬಂಧ ಆರೋಪಿಯ ಹುಡುಕಾಟ ನಡೆಯುತ್ತಿದೆ ಹಾಗೂ ಕಾಮುಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- 6 ಮಂದಿ ಸಾವು

Leave a Reply

Your email address will not be published.

Back to top button