ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ

Public TV
1 Min Read
steel almira

ಲಕ್ನೋ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.

MOTHER CHILD

ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು ಕಾಣದಿದ್ದಾಗ ಗಾಬರಿಗೊಂಡು ಎಲ್ಲ ಕಡೆ ಹುಡುಕಿದ್ದಾರೆ. ಬಹಳ ಸಮಯದ ಬಳಿಕ ಬಟ್ಟೆ ಇಡಲು ಪೆಟ್ಟಿಗೆ ತೆರೆದಾಗ ಮಕ್ಕಳು ಅದರಲ್ಲಿ ಪತ್ತೆಯಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಯಾದವ್ವೇಂದ್ರ ಯಾದವ್ ಹೇಳಿದ್ದಾರೆ.

Police Jeep

ಮಕ್ಕಳನ್ನು ತಪಾಸಣೆ ಮಾಡಿದ ವೈದ್ಯರು, ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮಾನಸಿಕ ಅಸ್ವಸ್ಥ ತಾಯಿಯಿಂದ ಘಟನೆ ನಡೆದಿದೆ. ಈ ಸಂಬಂಧ ಕುಟುಂಬದವರು ಪೊಲೀಸರಿಗೆ ದೂರು ನೀಡಿಲ್ಲ. ಖಮಾರಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರೂ, ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *