– ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ
ಆಗ್ರಾ: ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಅನಾಥ ಮಹಿಳೆಯ ಶವಕ್ಕೆ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಅತ್ಯಾಚಾರಕ್ಕೊಳಗಾಗಿ ಆಗ್ರಾದ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಮಹಿಳೆಯ ಶವವನ್ನು ತೆಗೆದುಕೊಂಡು ಹೋಗಲು ಯಾರೂ ಬರಲಿಲ್ಲ. ಹೀಗಾಗಿ ಆಗ್ರಾ ಪೊಲೀಸರು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಿದರು. ಅಷ್ಟೇ ಅಲ್ಲದೆ ತಿಥಿ ಕೂಡ ಮಾಡಿ, ಅನೇಕರಿಗೆ ಊಟ ಬಡಿಸಿದ್ದಾರೆ. ಆಗ್ರಾ ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
Advertisement
Advertisement
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್‍ಪಿ ರೋಹನ್ ಬಾಟ್ರೆ ಅವರು, ಅತ್ಯಾಚಾರ ಸಂತ್ರಸ್ತೆ ಕೆಲವು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಆದರೆ ಆಕೆಯ ದೇಹವನ್ನು ತೆಗೆದುಕೊಂಡು ಹೋಗಲು ಯಾರೂ ಬರಲಿಲ್ಲ. ಹೀಗಾಗಿ ನಮ್ಮ ಸಿಬ್ಬಂದಿಯೇ ಅಂತ್ಯಕ್ರಿಯೆ ನೆರವೇರಿ, ತಿಥಿ ಕೂಡ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಈ ಕಾರ್ಯಕ್ಕೆ ಸ್ಥಳೀಯರು ಕೂಡ ಪೊಲೀಸರನ್ನು ಶ್ಲಾಘಿಸಿದ್ದಾರೆ. ಜೊತೆಗೆ ಇದು ಉತ್ತಮ ಉಪಕ್ರಮ ಎಂದು ಬಣ್ಣಿಸಿದ್ದಾರೆ. ಇಂತಹ ಪ್ರಯತ್ನಗಳು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ಉತ್ತಮ ಸಂಬಂಧವನ್ನು ಸೃಷ್ಟಿಸುತ್ತದೆ ಹಾಗೂ ಆತ್ಮವಿಶ್ವಾಸವನ್ನು ತುಂಬುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.