ಪಾಟ್ನಾ: ಪಂಜಾಬ್‍ಗೆ ಬಿಹಾರದ ಜನರು ನೀಡಿರುವ ಕೊಡುಗೆ ಎಷ್ಟು ಮತ್ತು ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆ ಎಂಬುದು ಕಾಂಗ್ರೆಸ್‍ನವರಿಗೆ ತಿಳಿದಿದೆಯೇ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.
ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್‍ಗೆ ಬರಲು ಬಿಡಬೇಡಿ ಎಂಬ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರು ಇಂತಹ ಹೇಳಿಕೆಗಳನ್ನು ಹೇಗೆ ನೀಡುತ್ತಾರೆಂದು ನನಗೆ ದಿಗ್ಭ್ರಮೆಯಾಗಿದೆ ಎಂದು ಹೇಳಿದರು.
ಉತ್ತರ ಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಕಾಂಗ್ರೆಸ್ ಮತ್ತು ಪಂಜಾಬ್ ಮುಖ್ಯಮಂತ್ರಿ ಮತಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿ, ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್
ನಿನ್ನೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ