ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
लखीमपुर खीरी जनपद की गोला विधानसभा क्षेत्र से भाजपा विधायक श्री अरविन्द गिरि जी का निधन अत्यंत दुःखद है।
मेरी संवेदनाएं शोक संतप्त परिजनों के साथ हैं।
प्रभु श्री राम दिवंगत आत्मा को अपने श्री चरणों में स्थान व शोकाकुल परिजनों को यह अथाह दुःख सहने की शक्ति प्रदान करें।
ॐ शांति!
— Yogi Adityanath (@myogiadityanath) September 6, 2022
Advertisement
ಅರವಿಂದ್ ಗಿರಿ ಅವರು ಲಖೀಂಪುರ ಖೇರಿ ಜಿಲ್ಲೆಯ ಗೋಲ ಗೋಕ್ರನಾಥ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಈ ಕುರಿತಂತೆ ಮಾಹಿತಿ ನೀಡಿರುವ ಲಖೀಂಪುರ ಖೇರಿ ಬಿಜೆಪಿ ಘಟಕ, ಹೃದಯಾಘಾತದ ಬಳಿಕ ಕೂಡಲೇ ಅರವಿಂದ್ ಗಿರಿ ಅವರನ್ನು ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯುವಾಗ ಸೀತಾಪುರ ಬಳಿ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಪಬ್ಲಿಕ್ ಟಿವಿ ಗಣೇಶ- ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ
Advertisement
Advertisement
ಅರವಿಂದ್ ಗಿರಿ ಅವರ ಸಾವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ ಗೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಗಿರಿ ಅವರ ಸಾವು ದುರದೃಷ್ಟಕರವಾಗಿದೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಭಗವಾನ್ ಶ್ರೀರಾಮನ ಪಾದದಲ್ಲಿ ಅವರ ಆತ್ಮ ನೆಲೆಸಲಿ ಮತ್ತು ಈ ದುಃಖವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ ನೀಡಲಿ. ಇದು ತುಂಬಲಾರದ ನಷ್ಟ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜನ ಅವಕಾಶ ಕೊಟ್ಟಿದ್ದು, ಕೆಲಸ ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ- ಸಿಎಂಗೆ ಡಿಕೆಶಿ ಸವಾಲು
Advertisement