ಲಕ್ನೋ: ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆಯಲ್ಲೇ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.
ಖಾಸಗಿ ಕಾಲೇಜುವೊಂದರ ಗುಮಾಸ್ತ ತನ್ನ ಮನೆ ಕಾಲೇಜಿನ ಪಕ್ಕದಲ್ಲೇ ಇದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆಯಿಸಿ ಪರೀಕ್ಷೆ ಮಾಡಿದ್ದಾನೆ. ಜೊತೆಗೆ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಬೇರೆಯವರ ಕೈಯಲ್ಲಿ ದುಡ್ಡು ಕೊಟ್ಟು ಪರೀಕ್ಷೆ ಬರೆಸುತ್ತಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗುಮಾಸ್ತನ ಮನೆಯ ಮೇಲೆ ದಾಳಿಮಾಡಿದ್ದಾರೆ. ದಾಳಿ ವೇಳೆ ಗುಮಾಸ್ತ ಎಸ್ಕೇಪ್ ಆಗಿದ್ದು, ಪ್ರಶ್ನೆ ಪತ್ರಿಕೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗ ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದಾಗ ನಾವು ಇಲ್ಲಿ ಪರೀಕ್ಷೆ ಬರೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಮನೆಯಲ್ಲಿ ವಿದ್ಯಾರ್ಥಿಗಳ ಜೊತೆ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಉತ್ತರ ಪ್ರದೇಶದಲ್ಲಿ 10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಗಳ ಆರಂಭಗೊಂಡಿದ್ದು, ಸುಮಾರು 56 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಕಟ್ಟುನಿಟ್ಟಿನಿಂದ ನಡೆಸಬೇಕು ಎಂದು ಉತ್ತರ ಪ್ರದೇಶದ ಶಿಕ್ಷಣ ಇಲಾಖೆ ಬಹಳ ಪ್ರಯತ್ನ ಮಾಡುತ್ತಿದೆ. ಈ ನಡುವೆ ಈ ರೀತಿಯ ಅವ್ಯವಹಾರ ನಡೆಯುತ್ತಿರುವುದು ಕಂಡು ಶಿಕ್ಷಣ ಇಲಾಖೆ ತಲೆಕೆಡಿಸಿಕೊಂಡಿದೆ.
Advertisement
ಕಳೆದ ವಾರವಷ್ಟೇ ಹೇಗೆ ಮೋಸ ಮಾಡಿ ಪರೀಕ್ಷೆ ಬರೆಯಬೇಕು ಮತ್ತು ನೀವು ನೀವೇ ಮಾತನಾಡಿಕೊಂಡು ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದ ಖಾಸಗಿ ಶಾಲೆಯ ಪ್ರಾಂಶುಪಾಲನನ್ನು ಬಂಧಿಸಲಾಗಿತ್ತು.