ಲಕ್ನೋ: ಅಯೋಧ್ಯೆ ದೇವಾಲಯಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ತೆರಿಗೆ ವಿನಾಯಿತಿಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಅಯೋಧ್ಯೆಯ ದೇವಾಲಯಗಳು ಮತ್ತು ಇತರ ದೇವಾಲಯಗಳ ಮೇಲೆ ವಾಣಿಜ್ಯ ತೆರಿಗೆಯನ್ನು ವಿಧಿಸದಂತೆ ನಗರದ ಮುನ್ಸಿಪಲ್ ಕಾರ್ಪೊರೇಶನ್‍ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅದೇಶಿಸಿದ್ದಾರೆ. ನಗರದ ದೇವಸ್ಥಾನಗಳು, ಧರ್ಮಶಾಲೆಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ಈ ವಿನಾಯಿತಿ ಅನ್ವಯಿಸಲಿದೆ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್
Advertisement
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ನಂತರ ನಡೆಯುವ ಜಾತ್ರೆಯಲ್ಲಿ ಸುಮಾರು 10 ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಅಯೋಧ್ಯೆಯಲ್ಲಿ, ಆದಿತ್ಯನಾಥ್ ಅವರು ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಭಗವಾನ್ ರಾಮ ಮಂದಿರದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು. ರಾಜ್ಯದ ಉಸ್ತುವಾರಿ ವಹಿಸಿಕೊಂಡ ನಂತರ ಅಯೋಧ್ಯೆಗೆ ಮೊದಲ ಭೇಟಿ ನೀಡಿದ ಆದಿತ್ಯನಾಥ್ ಅವರು ದೇವಾಲಯದ ಪಟ್ಟಣದಲ್ಲಿ ಮುಂಬರುವ ರಾಮ ನವಮಿ ಮೇಳದ ಸಿದ್ಧತೆಯನ್ನು ಪರಿಶೀಲಿಸಿದರು.