ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬೆಳ್ಳಿ ರಾಮಮಂದಿರ ಪ್ರತಿರೂಪವನ್ನು (Ram Mandir Replica) ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಗೋವಿಂದ್ ದೇವ್ ಗಿರಿ ಜಿ ಮಹಾರಾಜ್ ಸ್ವಾಮೀಜಿ ಮೋದಿಗೆ ಶಾಲು ಹೊದಿಸಿ ಗೌರವಿಸಿದರು.
Advertisement
ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಅವರು RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೂ ಬೆಳ್ಳಿಯಿಂದ ನಿರ್ಮಿಸಲಾದ ರಾಮಮಂದಿರ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಲಾಯಿತು. ಇದನ್ನೂ ಓದಿ: ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು: ಅಯೋಧ್ಯೆಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಮಾತು
Advertisement
ಪ್ರಾಣಪ್ರತಿಷ್ಠೆ ಸಂಪನ್ನ:
ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ (ಅಭಿಜಿತ್ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.
Advertisement
Advertisement
ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ