ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

Public TV
3 Min Read
Mayawati

ಲಕ್ನೋ: ಹೈದರಾಬಾದಿನ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ಬಹುಜನ್ ಸಮಾಜ್ ಪಕ್ಷ(ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, ದೆಹಲಿ, ಉತ್ತರ ಪ್ರದೇಶ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಮಾಯಾವತಿ ಅವರು ಹೈದರಾಬಾದ್ ಪೊಲೀಸರಿಗೆ ಅಭಿನಂದನೆ ತಿಳಿಸಿದರು. ಜೊತೆಗೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಒತ್ತು ಕೊಟ್ಟಿಲ್ಲವೆಂದು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. ಆದರೆ ದುರಾದೃಷ್ಟವಶಾತ್ ಇಲ್ಲಿ ಕ್ರಿಮಿನಲ್‍ನಳನ್ನು ರಾಜ್ಯದ ಅತಿಥಿಗಳ ರೀತಿ ಸತ್ಕರಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ

ಈಗ ಉತ್ತರ ಪ್ರದೇಶದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ. ಮುಂದೆ ಈ ಮನೋಭಾವ ಬದಲಾಗುತ್ತದೆಂದು ಆಶಿಸುತ್ತೇನೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರೆ ರಾಜ್ಯ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಕಿಡಿಕಾಡಿದರು. ಇದನ್ನೂ ಓದಿ: ‘ಹತ್ಯಾಚಾರಿ’ಗಳ ಎನ್‍ಕೌಂಟರ್- ಪೊಲೀಸರಿಗೆ ಸ್ಟಾರ್ಸ್ ಶಬ್ಬಾಶ್

ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈಬರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ.

ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

ಸೈಬರಾಬಾದ್ ಪೊಲೀಸರ ಈ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಸಿನಿಮಾ ಕಲಾವಿದರು, ರಾಜಕಾರಣಿಗಳು, ಸಾರ್ವಜನಿಕರು ಪೊಲೀಸರಿಗೆ ಸಲಾಂ ಎಂದಿದ್ದಾರೆ. ಬೆಳ್ಳಂಬೆಳಗ್ಗೆ ಒಳ್ಳೆ ಸುದ್ದಿ ಕೊಟ್ಟಿದ್ದೀರಿ, ಅತ್ಯಾಚಾರಿಗಳನ್ನು ಹತ್ಯೆಗೈದಿದ್ದು ಸರಿಯಾಗಿದೆ. ಇದು ಬೇರೆಯವರಿಗೆ ಪಾಠವಾಗಲಿದೆ ಎಂದು ಪೊಲೀಸರಿಗೆ ಧನ್ಯವಾದ ತಿಳಿಸುತ್ತಿದ್ದಾರೆ.

ಏನಿದು ಪ್ರಕರಣ?
ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು.

ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.

Share This Article
Leave a Comment

Leave a Reply

Your email address will not be published. Required fields are marked *