Connect with us

ಉತ್ತರಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

ಉತ್ತರಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತಗಳ ಚುನಾವಣೆ ಇಂದಿನಿಂದ ಶುರುವಾಗ್ತಿದೆ.

ಮೊದಲ ಹಂತದ ಮತದಾನದಲ್ಲಿ ಇಂದು 73 ವಿಧಾನಸಭಾ ಕ್ಷೇತ್ರಗಳಲ್ಲಿ 2.6ಕೋಟಿಗೂ ಹೆಚ್ಚು ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಶಾಮ್ಲಿ, ಮುಝಾಫರ್‍ನಗರ್, ಭಾಗ್‍ಪತ್, ಮೀರತ್, ಘಜಿಯಾಬಾದ್, ಗೌತಮ್ ಬುದ್ಧ ನಗರ್, ಹಾಪುರ್, ಬುಲಂದ್‍ಶಹರ್, ಆಲಿಘರ್, ಮಥುರಾ, ಹತ್ರಾಸ್, ಆಗ್ರಾ, ಫಿರೋಝಾಬಾದ್, ಇಟಾ ಹಾಗೂ ಕಾಸ್‍ಗಂಜ್ ಜಿಲ್ಲೆಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.

ಈ ಬಾರಿ ಬಿಜೆಪಿ, ಸಮಾಜವಾದಿ ಪಕ್ಷ-ಕಾಂಗ್ರೆಸ್ ಮೃತ್ರಿ ಹಾಗೂ ಬಿಎಸ್‍ಪಿ ನಡುವೆ ನೇರ ಹಣಾಹಣಿ ಇರಲಿದೆ ಎಂದು ಹೇಳಲಾಗಿದೆ. ಇನ್ನು ಇದೇ ಮೊದಲ ಬಾರಿ ಚುನಾವಣಾ ಪ್ರಚಾರ ಅಖಾಡಕ್ಕೆ ಧುಮಕಲಿರುವ ಪ್ರಿಯಾಂಕಾ ಗಾಂಧಿ, ಫೆಬ್ರವರಿ 13ರಿಂದ ಅಮೇಥಿ ಹಾಗೂ ರಾಯ್ ಬರೇಲಿಯಲ್ಲಿ ಸಹೋದರ ರಾಹುಲ್ ಜೊತೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮುಂದಿನ 6 ಹಂತದ ಮತದಾನ ಫೆಬ್ರವರಿ 15, 19,23 ಹಾಗೂ 27 ಮತ್ತು ಮಾರ್ಚ್ 4 ಹಾಗೂ 8ರಂದು ನಡೆಯಲಿದೆ