ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದು, ಪ್ರಬಲ ಪ್ರತಿಸ್ಪರ್ಧಿಯಾಗಿರುವ ಸಮಾಜವಾದಿ ಪಕ್ಷವನ್ನು ಗುರಿಯಾಗಿಸಿ ಬಿಜೆಪಿ ಟೀಕಾಪ್ರಹಾರ ನಡೆಸುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಮಾಜವಾದಿ ಪಕ್ಷ ಮತದಾರರನ್ನು ಪ್ರೇರೇಪಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ್ದಾರೆ.
Advertisement
ಇದು ನಕಲಿ ಸರ್ಕಾರ ವರ್ಸಸ್ ಗರೀಬ್ ಕ ಸರ್ಕಾರ (ಬಡವರ ಸರ್ಕಾರ) ನಡುವಿನ ಹೋರಾಟ. ಯುಪಿ ರಾಜ್ಯ ಸರ್ಕಾರ, ಬಡವರಿಗೆ ಮನೆ, ಹಿಂದುಳಿದ ವರ್ಗಗಳಿಗಾಗಿ ಯೋಜನೆಗಳು, ವೈದ್ಯಕೀಯ ಕಾಲೇಜುಗಳ ಸ್ಥಾಪನೆ, ಎಕ್ಸ್‌ಪ್ರೆಸ್‌ವೇಗಳು, ಹೆಣ್ಣುಮಕ್ಕಳ ವಿವಾಹಕ್ಕೆ ನೆರವು ಮುಂತಾದ ಸೇವಾಕಾರ್ಯಗಳನ್ನು ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್ ಖಾತೆಯಲ್ಲಿ ರಾಜ್ಯಪಾಲರನ್ನು ಬ್ಲಾಕ್ ಮಾಡಿದ ಮಮತಾ ಬ್ಯಾನರ್ಜಿ
Advertisement
ಈಚಿನ ದಿನಗಳಲ್ಲಿ ಜನರು ಬಹಳಷ್ಟು ಕನಸು ಕಾಣುತ್ತಿದ್ದಾರೆ. ಕೆಲವರು ಮಾತ್ರ ನಿದ್ರೆ ಮಾಡುತ್ತಲೇ ಕನಸು ಕಾಣುತ್ತಿದ್ದಾರೆ. ಆದರೆ ಯೋಗಿ ಆದಿತ್ಯನಾಥ್ ಅವರು ಎಚ್ಚರವಾಗಿದ್ದಾರೆ. ಯುಪಿ ಅಭಿವೃದ್ಧಿಗಾಗಿ ಬದ್ಧರಾಗಿದ್ದಾರೆ ಎಂದು ಮೋದಿ ಬಣ್ಣಿಸಿದ್ದಾರೆ.
Advertisement
Advertisement
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಸವಾಲಾಗಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ರಾಜ್ಯದಲ್ಲಿ ಸರ್ಕಾರ ರಚಿಸುವುದಾಗಿ ಹೇಳಲು ಭಗವಾನ್ ಕೃಷ್ಣ ಪ್ರತಿದಿನ ರಾತ್ರಿ ಕನಸಿನಲ್ಲಿ ಬರುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ: ಅಣ್ಣಾ ಹಜಾರೆ