ಲಕ್ನೋ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನದಿಂದಾಗಿ ಅವರಿಗೆ ಸಂತಾಪ ಸೂಚಿಸಲು ಬಿಜೆಪಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣಾ ಪ್ರಣಾಳಿಕೆ ಬಿಡುಗಡೆಯನ್ನು ರದ್ದುಗೊಳಿಸಿದೆ.
ಗಾನ ಕೋಗಿಲೆಯ ನಿಧನಕ್ಕೆ ಸರ್ಕಾರ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‍ನಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಲತಾ ಮಂಗೇಶ್ಕರ್ ಅವರ ನಿಧನದಿಂದಾಗಿ ಕೇಂದ್ರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಉಪ ಕೇಶವ್ ಮೌರ್ಯ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥ ಸ್ವತಂತ್ರ ದೇವ್ ಅವರು ಎರಡು ನಿಮಿಷಗಳ ಮೌನ ಆಚರಿಸಿ, ಪ್ರಣಾಳಿಕೆ ಬಿಡುಗಡೆಯನ್ನು ಮುಂದಕ್ಕೆ ಹಾಕಿದರು.
Advertisement
Advertisement
ಈ ಬಗ್ಗೆ ಮಾತನಾಡಿದ ಉತ್ತರಪ್ರದೇಶದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರು, ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ನಾವು ಪಕ್ಷದ ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡುತ್ತಿದ್ದೇವೆ. ಅದರ ಬಿಡುಗಡೆಯ ಮುಂದಿನ ದಿನಾಂಕವನ್ನು ನಾವು ನಂತರ ನಿರ್ಧರಿಸುತ್ತೇವೆ ಎಂದು ತಿಳಿಸಿದರು.
Advertisement
Advertisement
ಗೋವಾಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ವರ್ಚುವಲ್ ರ‍್ಯಾಲಿ ಸೇರಿದಂತೆ ಬಿಜೆಪಿಯು ತನ್ನ ಇತರ ಕೆಲವು ರಾಜಕೀಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದೆ. ಇದನ್ನೂ ಓದಿ: ಲತಾ ಮಂಗೇಶ್ಕರ್‌ರ ಮೊದಲ ಹಾಡನ್ನು ಸಿನಿಮಾದಿಂದ ತೆಗೆಯಲಾಗಿತ್ತು – ನೀವು ತಿಳಿಯಲೇಬೇಕಾದ 10 ಸಂಗತಿಗಳು ಇಲ್ಲಿವೆ!
ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮುಂಬೈನ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲ ಅಗಲಿದ್ದಾರೆ. ಅವ ನಿಧನಕ್ಕೆ ಪಿಎಂ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸಲ್ಲಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ನಿಧನ- ಬಾಲಿವುಡ್ ಸಂತಾಪ