ಲಕ್ನೋ: ಪ್ರತಿಪಕ್ಷಗಳು ಅಪರಾಧವನ್ನು ರಾಜಕೀಯಗೊಳಿಸಿ, ಮಾಫಿಯಾವನ್ನು ರಕ್ಷಿಸುತ್ತದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಎಸ್‍ಪಿ ಹೊರತುಪಡಿಸಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಅವರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಇದರಿಂದಾಗಿ ರಾಜಕೀಯ ಪ್ರತಿಸ್ಪರ್ಧಿಗಳು ರಾಜ್ಯವನ್ನು ಹಿಂದುಳಿಸಿದ್ದಾರೆ ಎಂದು ಆರೋಪಿಸಿದರು.
Advertisement
Advertisement
ಟ್ವೀಟ್‍ನಲ್ಲಿ ಏನಿದೆ?: ಬಿಎಸ್‍ಪಿ ಹೊರತುಪಡಿಸಿ ಎಲ್ಲಾ ಪಕ್ಷಗಳ ಸರ್ಕಾರಗಳು ರಾಜಕೀಯವನ್ನು ಅಪರಾಧೀಕರಿಸುವ ಮೂಲಕ ಮತ್ತು ಅಪರಾಧವನ್ನು ರಾಜಕೀಯಗೊಳಿಸುವುದರ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಕಾನೂನಿನೊಂದಿಗೆ ಆಟವಾಡುವುದು ಮತ್ತು ತಮ್ಮ ಪಕ್ಷದ ಗೂಂಡಾಗಳನ್ನು ಹಾಗೂ ಮಾಫಿಯಾವನ್ನು ರಕ್ಷಿಸುತ್ತಿದ್ದಾರೆ. ಉತ್ತರ ಪ್ರದೇಶವನ್ನು ಬಡ ಮತ್ತು ಹಿಂದುಳಿಯುವಂತೆ ಮಾಡುವ ಮೂಲಕ ಜಂಗಲ್ ರಾಜ್‍ಗೆ ತಳ್ಳುತ್ತಿದ್ದಾರೆ ಎಂದು ಟ್ವೀಟ್‍ನಲ್ಲಿ ಕಿಡಿಕಾರಿದರು. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!
Advertisement
बीएसपी को छोड़ सभी पार्टियों की सरकारें राजनीति के अपराधीकरण व अपराध के राजनीतिकरण, कानून के साथ खिलवाड़ तथा अपनी पार्टी के गुण्डों व माफियाओं को संरक्षण आदि से यूपी को जंगलराज में ढकेल इसे गरीब व पिछड़ा बनाए रखकर जनता को त्रस्त करने की दोषी, किन्तु इनकी जुमलेबाजीे जारी।
— Mayawati (@Mayawati) January 25, 2022
Advertisement
ಉತ್ತರಪ್ರದೇಶದ ಚುನಾವಣೆಗೆ ಇನ್ನೇನು ಕೆಲವೇ ವಾರಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೈ ತಪ್ಪಿದ್ದಕ್ಕೆ ಅಸಮಾಧಾನ ಇಲ್ಲ, ತುಮಕೂರು ಸಿಕ್ಕಿದ್ರೆ ಖುಷಿಯಾಗ್ತಿತ್ತು: ಮಾಧುಸ್ವಾಮಿ