ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕ್ರೀಡಾ ಸಚಿವ ಉಪೇಂದ್ರ ತಿವಾರಿ ಅವರು ಓಡಿ ಬಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ವೀಡಿಯೋ ವೈರಲ್ ಆಗಿದೆ.
ಜಿಲ್ಲೆಯ ಫೆಫ್ನಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉತ್ತರಪ್ರದೇಶ ಚುನಾವಣೆಯಲ್ಲಿ ತಿವಾರಿ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಲ್ಲಿಯಾ ಕಲೆಕ್ಟರೇಟ್‍ನಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತಿವಾರಿ ಕೇಸರಿ ಶಾಲು ಹಾಗೂ ಹಾರವನ್ನು ಧರಿಸಿ ಬಲ್ಲಿಯಾ ಕಲೆಕ್ಟರೇಟ್ ಕಚೇರಿಯ ಮುಖ್ಯ ಗೇಟ್‍ನಿಂದ ನಾಮನಿರ್ದೇಶನ ಸಭಾಂಗಣಕ್ಕೆ ಓಡುತ್ತಿರುವ ದೃಶ್ಯ ವೈರಲ್ ಆಗಿದೆ.
Advertisement
#WATCH | UP Sports Minister Upendra Tiwari sprinted to Collectorate Office in Ballia y’day as he was running late to file his nomination. Y’day nominations were scheduled to be filed by 3 pm & the minister was running late, nomination process still ongoing#UttarPradeshElections pic.twitter.com/99HSIPHwoA
— ANI UP/Uttarakhand (@ANINewsUP) February 5, 2022
Advertisement
ಫೆಫ್ನಾ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಫೆ.11 ಕೊನೆಯ ದಿನವಾಗಿದ್ದರೂ ಶುಕ್ರವಾರದ ಗಡುವನ್ನು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ನೀಡಲು ಅವರು ಬಯಸಿದ್ದರು. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆ. 10ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಗೋವಾ ಚುನಾವಣೆಯಲ್ಲಿ ಬಿಜೆಪಿ – ಕಾಂಗ್ರೆಸ್ ನೇರ ಪೈಪೋಟಿ: ರಾಹುಲ್ ಗಾಂಧಿ