CrimeLatestNational

ಆಟವಾಡುತ್ತಿದ್ದ 5ರ ಬಾಲೆಯ ಮೇಲೆ 12ರ ಪೋರನಿಂದ ಅತ್ಯಾಚಾರ!

ಲಕ್ನೋ: ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಷಹಜಾನ್‍ಪುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಅತ್ಯಾಚಾರ ಎಸಗಿದ ಬಾಲಕ 12 ವರ್ಷದವನಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ಈ ಕುರಿತು ಕಾಲನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆದಿದೆ ಅಂತಾ ಗುರುವಾರ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ವಿವರ:
ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಯೇ ಇದ್ದ 12 ವರ್ಷದ ಬಾಲಕ ಅಕೆಯನ್ನು ಮನೆಯ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

16ರ ಬಾಲೆ ಮೇಲೆ ಅತ್ಯಾಚಾರ:
ಇಂತಹದ್ದೇ ಘಟನೆಯೊಂದು ಸೋಮವಾರ ರಾಜಸ್ಥಾನದ ಭೋಪಾ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿತ್ತು. ನೆರಮನೆಯಲ್ಲಿ ಕೈ ಬೋರ್ ನೀರು ತರಲು ಹೋಗಿದ್ದ 16 ವರ್ಷದ ಬಾಲಕಿಯ ಮೇಲೆ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಸೋಮವಾರ ನಡೆದಿತ್ತು. ಈ ಕುರಿತು ಸಂತ್ರಸ್ತ ಬಾಲಕಿಯ ಸಹೋದರ ಭೋಪಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ.

ಬೋರ್ ನೀರು ತರಲು ಸಹೋದರಿ ಹೋಗಿದ್ದಳು. ಈ ವೇಳೆ ಅಲ್ಲಿಯೇ ಇದ್ದ ಕೆಲವು ಯುವಕರು ಆಕೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಅತ್ಯಾಚಾರದ ದೃಶ್ಯ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಸಹೋದರ ದೂರಿನಲ್ಲಿ ತಿಳಿಸಿದ್ದ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Leave a Reply

Your email address will not be published.

Back to top button