ಲಕ್ನೋ: ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲು ಹೋಗಿದ್ದ 13 ವರ್ಷದ ಬಾಲಕಿ ಮೇಲೆಯೇ ಪೊಲೀಸರು ಮತ್ತೆ ಅತ್ಯಾಚಾರ ನಡೆಸಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಲಿತಪುರದಲ್ಲಿ ನಡೆದಿದೆ.
ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸಂತ್ರಸ್ತೆ ತನ್ನ ಸಂಬಂಧಿಕರೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದಳು. ಆದರೆ ಪೊಲೀಸ್ ಅಧಿಕಾರಿಯೊಬ್ಬ, ಪ್ರಕರಣ ದಾಖಲಿಸಲು ಬಂದ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದನ್ನೂ ಓದಿ: ತನ್ನ ಗಂಡನನ್ನು ಬೇರೊಬ್ಬರ ಜೊತೆ ಹಂಚಿಕೊಳ್ಳಲು ಮಹಿಳೆ ಇಷ್ಟಪಡಲ್ಲ: ಅಲಹಾಬಾದ್ ಹೈಕೋರ್ಟ್
Advertisement
Advertisement
ಆರೋಪಿ ಠಾಣಾಧಿಕಾರಿ ತಿಲಕ್‌ಧಾರಿ ಸರೋಜ್‌ನನ್ನು ಅಮಾನತುಗೊಳಿಸಲಾಗಿದೆ. ಆತನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಆರೋಪಿ ಪರಾರಿಯಾಗಿದ್ದಾನೆ. ಆತನ ಪತ್ತೆ ಮೂವರ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಲಲಿತಪುರದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ನಾಲ್ವರು ಆರೋಪಿಗಳು ನನ್ನ ಮಗಳಿಗೆ ಆಮಿಷವೊಡ್ಡಿ ಏ.22ರಂದು ಭೋಪಾಲ್‌ಗೆ ಕರೆದೊಯ್ದಿದ್ದರು. ಈ ವೇಳೆ ನಾಲ್ಕು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಗ್ರಾಮಕ್ಕೆ ಕರೆತಂದು ಪೊಲೀಸ್ ಠಾಣೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ ಬಾಲಕಿಯನ್ನು ಪೊಲೀಸರು ಆಕೆಯ ಚಿಕ್ಕಮ್ಮನಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS
Advertisement
ಮಾರನೇ ದಿನ ಸಂತ್ರಸ್ತೆಯಿಂದ ಹೇಳಿಕೆ ಪಡೆಯಲು ಠಾಣೆಗೆ ಬರುವಂತೆ ಪೊಲೀಸರು ತಿಳಿಸಿದ್ದಾರೆ. ಚಿಕ್ಕಮ್ಮನೊಂದಿಗೆ ಠಾಣೆಗೆ ಬಂದ ಸಂತ್ರಸ್ತೆಯನ್ನು ಠಾಣೆಯ ಉಸ್ತುವಾರಿ ವಹಿಸಿದ್ದ ಸಿಬ್ಬಂದಿ ಕೋಣೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಎಫ್‌ಐಆರ್‌ನಲ್ಲಿ ಬಾಲಕಿ ಚಿಕ್ಕಮ್ಮನನ್ನೂ ಆರೋಪಿ ಎಂದು ಹೆಸರಿಸಲಾಗಿದೆ.
ಪೊಲೀಸ್ ಅಧಿಕಾರಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಲಲಿತಪುರ ಪೊಲೀಸ್ ಠಾಣೆಯ ನಿಖಿಲ್ ಪಾಠಕ್ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಕದನ ವಿರಾಮಕ್ಕೆ ಪ್ರಧಾನಿ ಮೋದಿ ಕರೆ