ಲಕ್ನೋ: ಅಕ್ರಮ ಸಂಬಂಧದ ಶಂಕೆಯಿಂದಾಗಿ ಪತಿ ತನ್ನ ಪತ್ನಿಯ ಕತ್ತು ಸೀಳಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ (Sambhal) ಪ್ರದೇಶದಲ್ಲಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ರಾಖಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಸೋನು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ – ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ
ತನ್ನ ಪತ್ನಿ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂದು ಆಕೆಯ ಕತ್ತನ್ನು ಚಾಕುವಿನಿಂದ ಸೀಳಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೂರು ಮಕ್ಕಳೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಕೊಲೆ ಮಾಡಿರುವುದಾಗಿ ಹೇಳಿ ಶರಣಾಗಿದ್ದಾನೆ.
ನಾನು ನನ್ನ ಹೆಂಡತಿಯನ್ನು ಕೊಲೆ ಮಾಡಿದ್ದೇನೆ. ನನ್ನನ್ನು ಅರೆಸ್ಟ್ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಆತನ ಮನೆಗೆ ತೆರಳಿ ಆಕೆಯ ಶವವನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.
ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿರುವ ಕುರಿತು ತಿಳಿಸಿದ್ದು, ನಾನು ಆಕೆಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದೇನೆ. ಆದರೆ ಅವಳು ಅದ್ಯಾವುದಕ್ಕೂ ಕಿವಿಗೊಡದೇ ಇದ್ದಾಗ ನಾನು ಅವಳನ್ನು ಕೊಲೆ ಮಾಡಿದೆ ಎಂದು ತಿಳಿಸಿದ್ದಾನೆ.ಇದನ್ನೂ ಓದಿ: ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವೇನಿಲ್ಲ – ನಿಖಿಲ್ ಕುಮಾರಸ್ವಾಮಿ