ಲಕ್ನೋ: ಪತಿ ಇಲ್ಲವೆಂದು ಖಚಿತಪಡಿಸಿಕೊಂಡು ಮೂವರು ಕಾಮುಕರು ಮನೆಗೆ ನುಗ್ಗಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇದಲ್ಲಿ ನಡೆದಿದೆ.
ಶಮ್ಲಿ ಜಿಲ್ಲೆಯಲ್ಲಿ ಶವಿವಾರ ದುಷ್ಕರ್ಮಿಗಳು ಕೃತ್ಯ ಎಸೆಗಿ, ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.
Advertisement
ಘಟನೆಯ ವಿವರ: ಸಂತ್ರಸ್ತ ಮಹಿಳೆ ಶನಿವಾರ ಮನೆಯಲ್ಲಿ ಒಬ್ಬಳೆ ಇದ್ದರು. ಇದನ್ನು ಅರಿತಿದ್ದ ಮೂವರು ಕಾಮುಕರು ಮನೆಗೆ ನುಗ್ಗಿ ಬಾಗಿಲು ಹಾಕಿದ್ದಾರೆ. ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಹಿಳೆ ಈ ಕುರಿತು ಸಮೀಪದ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Advertisement
ಇಂತಹದ್ದೆ ಘಟನೆಯೊಂದು ಉತ್ತರ ಪ್ರದೇಶದ ಬಾಗ್ಪಾಟ್ ಜಿಲ್ಲೆಯಲ್ಲಿ ನಡೆದಿತ್ತು. ಇಬ್ಬರು ಕಾಮುಕರು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv