ಲಕ್ನೋ: ಕಾಂಗ್ರೆಸ್ ಸಂಸದ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಶುಕ್ರವಾರ ಉತ್ತರ ಪ್ರದೇಶದಲ್ಲಿ (Uttar Pradesh) ಚಪ್ಪಲಿ ಹೊಲಿಯುವ ಚಮ್ಮಾರನ (Cobbler) ಅಂಗಡಿಗೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ಗಮನಸೆಳೆದಿದ್ದಾರೆ.
Advertisement
ಶುಕ್ರವಾರ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ಲಕ್ನೋಗೆ ತೆರಳುವ ವೇಳೆ ರಸ್ತೆ ಬದಿಯಲ್ಲಿದ್ದ ಚಮ್ಮಾರ ರಾಮ್ ಚೈತ್ ಎಂಬವರ ಅಂಗಡಿಗೆ ರಾಗಾ ದಿಢೀರ್ ಭೇಟಿ ನೀಡಿದ್ದಾರೆ. ಅಲ್ಲದೇ ಚಮ್ಮಾರನ ನಿರ್ದೇಶನದಂತೆ ಚಪ್ಪಲಿಯನ್ನು ಸರಿಪಡಿಸುವ ಪ್ರಯತ್ನವನ್ನೂ ರಾಹುಲ್ ಗಾಂಧಿ ಮಾಡಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್
Advertisement
Advertisement
ಚಮ್ಮಾರ ರಾಮ್ ಚೈತ್ ಈ ಅಂಗಡಿಯಲ್ಲಿ ಕಳೆದ 40 ವರ್ಷಗಳಿಂದ ಪಾದರಕ್ಷೆಗಳನ್ನು ತಯಾರಿಸುತ್ತಿದ್ದಾರೆ. ರಾಹುಲ್ ಗಾಂಧಿ ಈ ಅಂಗಡಿಯಲ್ಲಿ ಸುಮಾರು 30 ನಿಮಿಷಗಳ ಕಾಲ ರಾಮ್ ಚೈತ್ ಜೊತೆ ಕಾಲ ಕಳೆದು ಮಾತುಕತೆ ನಡೆಸಿದ್ದಾರೆ. ಅಲ್ಲದೇ ಕಷ್ಟಸುಖಗಳನ್ನೂ ಆಲಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಪಾನೀಯ ಸೇವಿಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ರಾಮ್ ಚೈತ್ ಅವರ ಸಮಸ್ಯೆಗಳನ್ನು ಪರಿಹರಿಸಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್
Advertisement
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಮ್ ಚೈತ್, ನಾನು ರಾಹುಲ್ ಅವರೊಂದಿಗೆ ನನ್ನ ಕೆಲಸದ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದೇನೆ ಮತ್ತು ಅವರಿಂದ ನನ್ನ ಕುಟುಂಬಕ್ಕೆ ಹಣಕಾಸಿನ ನೆರವು ಕೋರಿದ್ದೇನೆ ಎಂದು ತಿಳಿಸಿದ್ದಾರೆ. ಮಾತ್ರವಲ್ಲದೇ ಅಂಗಡಿಗೆ ಭೇಟಿ ನೀಡಿದ ಸಂದರ್ಭ ಪಾದರಕ್ಷೆಗಳನ್ನು ಸರಿಪಡಿಸುವ ವಿಧಾನವನ್ನು ಕಲಿತುಕೊಂಡು ಚಪ್ಪಲಿಯನ್ನು ಸರಿಪಡಿಸಲು ಪ್ರಯತ್ನಿಸಿದ್ದಾರೆ ಎಂದರು. ಇಷ್ಟು ಮಾತ್ರವಲ್ಲದೇ ವೃತ್ತಿ ಹೇಗೆ ನಡೆಯುತ್ತಿದೆ ಎಂಬ ಬಗ್ಗೆಯೂ ಚರ್ಚಿಸಿರುವುದಾಗಿ ರಾಮ್ ಚೈತ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟು
ಈ ಕುರಿತು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ದಾರಿಯಲ್ಲಿ ಕಾರನ್ನು ನಿಲ್ಲಿಸಿ ಚಮ್ಮಾರರ ಕುಟುಂಬವನ್ನು ಭೇಟಿಯಾದರು. ಈ ಶ್ರಮಜೀವಿಗಳ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ. ಬೀದಿಗಳಿಂದ ಸಂಸತ್ತಿನವರೆಗೆ ಧ್ವನಿ ಎತ್ತುತ್ತಿದ್ದೇವೆ. ಅವರ ಪ್ರಸ್ತುತ ಸುರಕ್ಷಿತ ಮತ್ತು ಭವಿಷ್ಯವನ್ನು ಸಮೃದ್ಧಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: 40 ವರ್ಷವಾದರೂ ನನಗೆ ಬದಲಿ ನಿವೇಶನ ಸಿಕ್ಕಿಲ್ಲ – ಕೇಂದ್ರ ಸಚಿವ ಹೆಚ್‌ಡಿಕೆ
ಇತ್ತೀಚಿಗಷ್ಟೇ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಯ್ ಬರೇಲಿಯಲ್ಲಿರುವ ಕ್ಷೌರಿಕನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ ನೀಡಿ ಕ್ಷೌರ ಮಾಡಿಸಿಕೊಂಡು ತಮ್ಮ ಗಡ್ಡವನ್ನು ಕೂಡ ಟ್ರಿಮ್ ಮಾಡಿಸಿಕೊಂಡಿದ್ದರು. ಅಲ್ಲದೇ ಟ್ರೆಂಡ್ ಆಗುತ್ತಿರುವ ಫೈಯರಿ ಹೇರ್‌ಕಟ್ ಬಗ್ಗೆ ಕೂಡ ಮಾಹಿತಿ ತಿಳಿದುಕೊಂಡಿದ್ದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು