– ಕೋರ್ಟಿಗೆ ಹೋಗುತ್ತಿದ್ದ ಸಂತ್ರಸ್ತೆಯ ಕೊಲೆಗೆ ಯತ್ನ
ಲಕ್ನೋ: ಕೋರ್ಟಿಗೆ ಹೋಗುತ್ತಿದ್ದ 23 ವರ್ಷದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶ ಉನ್ನಾವೋದಲ್ಲಿ ನಡೆದಿದೆ.
ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಈ ಅಮಾನವೀಯ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮಹಿಳೆಯು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಇದನ್ನೂ ಓದಿ: ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್
Advertisement
Advertisement
ಈ ಪ್ರಕರಣದ ಪ್ರತ್ಯಕ್ಷದರ್ಶಿ ರವೀಂದ್ರ ಪ್ರಕಾಶ್ ಪ್ರಮುಖ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೋಲೆಗೆ ಯತ್ನಿಸಿದ್ದೇವು ಎಂದು ತಿಳಿಸಿದ್ದಾರೆ.
Advertisement
ಶೇ.90ರಷ್ಟು ಸುಟ್ಟ ನಂತರವೂ ಸಂತ್ರಸ್ತೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿದಳು. ಮಹಿಳೆಯ ಗುರುತು ತಿಳಿದ ನಂತರವೂ ನಮ್ಮ ಭಯ ಕಡಿಮೆಯಾಗಲಿಲ್ಲ. ಆಕೆಯಿಂದ ದೂರವೇ ನಿಂತಿದ್ದೇವು. ಈ ವೇಳೆ ನಮ್ಮ ಬಳಿ ಫೋನ್ ಪಡೆದು, ಸ್ವತಃ 100 ನಂಬರ್ಗೆ ಕರೆ ಮಾಡಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದಳು. ಸಂತ್ರಸ್ತೆಯೊಂದಿಗೆ ಮಾತನಾಡಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ರವೀಂದ್ರ ಪ್ರಕಾಶ್ ಹೇಳಿದ್ದಾರೆ.
Advertisement
ಏನಿದು ಪ್ರಕರಣ: ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಳು. ಕೋರ್ಟ್ ವಿಚಾರಣೆಗೆ ಹಾಜರಾಗಲು ಮಹಿಳೆ ಹೋಗುತ್ತಿದ್ದಳು. ಈ ವೇಳೆ ಆಕೆಯ ಮೇಲೆ ಹಲ್ಲೆ ಮಾಡಿದ ಆರೋಪಿಗಳು, ಬೆಂಕಿ ಹಚ್ಚಿದ್ದಾರೆ.
ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಇಬ್ಬರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.