ಲಕ್ನೋ: ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಶೋನ್‍ಭಂದ್ರಾ ಜಿಲ್ಲೆಯ ಉಭಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಗುಂಡು ಹಾರಿಸಿದ್ದಾರೆ. ಗುಂಡೇಟಿಗೆ 19 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Advertisement
Advertisement
ಆಗಿದ್ದೇನು?:
ಯಾಗ್ಯ ದತ್ ಉಭಾ ಗ್ರಾಮದ ಸಮೀಪದ ಘೋರ್‍ವಾಲ್‍ನಲ್ಲಿ ಎರಡು ವರ್ಷಗಳ ಹಿಂದೆ 36 ಎಕರೆ ಕೃಷಿ ಭೂಮಿಯನ್ನು ಖರೀದಿಸಿದ್ದ. ಆದರೆ ಯಾಗ್ಯ ದತ್ ತನ್ನ ಸಹವರ್ತಿಗಳ ಜೊತೆಗೆ ಬುಧವಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೋಗಿದ್ದ. ಇದಕ್ಕೆ ಗ್ರಾಮಸ್ಥರು ಭಾರೀ ವಿರೋಧಿಸಿದ್ದರು. ಇದರಿಂದಾಗಿ ಗಲಾಟೆ ಆರಂಭವಾಗುತ್ತಿದ್ದಂತೆ ಯಾಗ್ಯ ದತ್ ಕಡೆಯ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡು ತಗುಲಿ 9 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 19 ಜನರ ಸ್ಥಿತಿ ಗಂಭೀರವಾಗಿದೆ.
Advertisement
Advertisement
ಈ ಕೃತ್ಯದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ 19 ಜನರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಹೊರಡಿಸಿದ್ದಾರೆ.
Firing over land dispute in Sonbhadra: CM Yogi Adityanath has announced a compensation of Rs 5 lakhs each to the victims of the incident in Sonbhadra and has also directed that Collector Sonbhadra should send report why pattas weren't given to residents of the village. (File pic) pic.twitter.com/SVIql6zSeL
— ANI UP/Uttarakhand (@ANINewsUP) July 17, 2019