ಲಕ್ನೋ: ಈ ಬಾರಿ ಉತ್ತರ ಪ್ರದೇಶವು (Uttar Pradesh) ವಾರ್ಷಿಕ GDP ಗಿಂತ (ರಾಷ್ಟ್ರೀಯ ಉತ್ಪನ್ನ) ಹೆಚ್ಚಿನ ಹೂಡಿಕೆ ಪ್ರಸ್ತಾಪಗಳನ್ನು ಪಡೆಯಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ವಿಶ್ವಾಸ ವ್ಯಕ್ಯಪಡಿಸಿದ್ದಾರೆ.
ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಈ ಬಾರಿ ಉತ್ತರ ಪ್ರದೇಶವು ವಾರ್ಷಿಕ ಜಿಡಿಪಿಗಿಂತ ಹೆಚ್ಚಿನ ಹೂಡಿಕೆ ಪ್ರಸ್ತಾಪ ಪಡೆಯಲಿದೆ. ಫೆಬ್ರವರಿ 10ರ ವರೆಗೆ ಕಾಯಿರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಲ್ಲಿ 22ನೇ ಸ್ಥಾನಕ್ಕೆ ಜಾರಿದ ಅದಾನಿ
Advertisement
Advertisement
ನಾನು 2018ರಲ್ಲೂ ಅದೇ ವಿಷಯ ಹೇಳಿದ್ದೆ. 2018ರಲ್ಲಿ ಜಿಡಿಪಿ 4.28 ಲಕ್ಷ ಕೋಟಿ ಇದ್ದರೆ, ಯುಪಿ 4.68 ಲಕ್ಷ ಕೋಟಿ ಹೂಡಿಕೆ ಪ್ರಸ್ತಾಪ ಪಡೆದುಕೊಂಡಿತ್ತು. ಈ ಬಾರಿ 23 ಲಕ್ಷ ಕೋಟಿ ಜಿಡಿಪಿ ಇದ್ದು, ಅದಕ್ಕಿಂತ ಹೆಚ್ಚಿನ ಹೂಡಿಕೆ ಪ್ರಸ್ತಾವನೆ ಪಡೆದೇ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಿಲಿಯಲ್ಲಿ ಕಾಡ್ಗಿಚ್ಚು: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ – 13 ಮಂದಿ ಸಾವು
Advertisement
ಡಬಲ್ ಇಂಜಿನ್ ಸರ್ಕಾರ ಮಾಡಿದ ಕೆಲಸಗಳು ಕಳೆದ 6 ವರ್ಷಗಳಲ್ಲಿ ರಾಜ್ಯವನ್ನ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. 2018 ರಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ (Global Investors Summit) 4 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೂಡಿಕೆಗಳನ್ನು ಸ್ವೀಕರಿಸಲಾಗಿದೆ. ಇದರೊಂದಿಗೆ ಕಳೆದ 6 ವರ್ಷಗಳಲ್ಲಿ ಉತ್ತರ ಪ್ರದೇಶದ (Uttar Pradesh) ಆರ್ಥಿಕ ಬೆಳವಣಿಗೆಯು ಅಸಾಧಾರಣವಾಗಿದ್ದು, ಭಾರತದ ಪ್ರಮುಖ ಹೂಡಿಕೆ ತಾಣಗಳಲ್ಲಿ ಒಂದಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
ರಾಜ್ಯವು ಹೆಚ್ಚಿನ ಆದಾಯ, ಫಲವತ್ತಾದ ಭೂಮಿ, ಉತ್ತಮ ಆಡಳಿತ, ಕಾನೂನು ಸುವ್ಯವಸ್ಥೆ, ಮಾನವ ಸಂಪತ್ತು, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ನೆಲೆಯನ್ನು ಹೊಂದಿದೆ. ಎಂಎಸ್‌ಎಂಇಗಳು (MSME) ಉತ್ತರಪ್ರದೇಶವನ್ನು ರಫ್ತು ಕೇಂದ್ರವಾಗಿ ಪರಿವರ್ತಿಸಿವೆ. ಅಲ್ಲದೇ ಕಳೆದ 6 ವರ್ಷಗಳಲ್ಲಿ ಹೊಸ ಎಕ್ಸ್‌ಪ್ರೆಸ್ ವೇಗಳು, ವಿಮಾನ ನಿಲ್ದಾಣಗಳು ಮತ್ತು ಮೆಟ್ರೋಗಳ ನಿರ್ಮಾಣವು ಹೂಡಿಕೆದಾರರನ್ನು ಹೆಚ್ಚಾಗಿ ಆಕರ್ಷಿಸುವಂತೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.
ಇದೇ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ `ಎಸ್ಪಿ ಸರ್ಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ’ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಎಸ್‌ಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೇ ಸ್ಯಾಮ್‌ಸಂಗ್ (Samsung) ಮತ್ತು TCS (ಟಾಟಾ ಕನ್ಸಲ್ಟೆನ್ಸಿ ಸರ್ವೀಸ್) ನಂತಹ ಕಂಪನಿಗಳು ರಾಜ್ಯವನ್ನು ತೊರೆಯುತ್ತಿದ್ದವು. ನಾನು ಅಧಿಕಾರಕ್ಕೆ ಬಂದ ನಂತರ ನಾನು ಎರಡೂ ಸಂಸ್ಥೆಗಳ ಅಧಿಕಾರಿಗಳನ್ನು ಕರೆದು ಸಮಸ್ಯೆ ಬಗೆಹರಿಸಿದೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k