Crime
ರುಂಡವಿಲ್ಲದ ಯುವತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಲಕ್ನೋ: ಪ್ರಿಯಕರನೊಂದಿಗೆ ಓಡಿಹೋಗಿದ್ದ ಯುವತಿ ಕೊಲೆಯಾಗಿದ್ದು, ರುಂಡವಿಲ್ಲದ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನಡೆದಿದೆ.
ಎರಡು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದ 22 ವರ್ಷ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ರುಂಡವಿಲ್ಲದ ಯುವತಿ ದೇಹ ಹೊಲದಲ್ಲಿ ಪತ್ತೆಯಾಗಿದೆ. ಈಕೆ ಬರೇಲಿ ಜಿಲ್ಲೆಗೆ ಸೇರಿದವಳಾಗಿದ್ದಾಳೆ ಎಂದು ತಿಳಿದು ಬಂದಿದೆ.
ಯುವತಿಯ ರುಂಡವನ್ನು ಕತ್ತರಿಸಿ ಕೊಲೆ ಮಾಡಿ ಬಾವಿಗೆ ಎಸೆಯಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದ್ದೇವೆ. ವಿಚಾರಣೆ ವೇಳೆ ಯುವತಿಯ ರುಂಡವನ್ನು ಎಸೆದಿರುವ ಜಾಗವನ್ನು ಹೇಳಿದ್ದಾರೆ. ಈ ಪ್ರಕರಣದ ಮುಖ್ಯ ಆರೋಪಿ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಫತೇಪುರದ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಹೇಳಿದ್ದಾರೆ.
