ಲಕ್ನೋ: ಕಸದ ಗಾಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫೋಟೋವನ್ನು ತುಂಬಿಕೊಂಡು ಹೋಗುತ್ತಿದ್ದಕ್ಕೆ ವಜಾಗೊಳಿಸಿದ್ದ ಪೌರ ಕಾರ್ಮಿಕನನ್ನು ಮರು ನೇಮಕ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಪೌರ ಕಾರ್ಮಿಕನೊಬ್ಬ ಕಸದ ಗಾಡಿಯಲ್ಲಿ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫೋಟೋವನ್ನು ತುಂಬಿಕೊಂಡು ಹೋಗುತ್ತಿದ್ದ. ಈ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ ಹಾಗೇ ಆ ಸಿಬ್ಬಂದಿಯನ್ನು ಮುನ್ಸಿಪಲ್ ಕಾರ್ಪೋರೇಷನ್ ಕೆಲಸದಿಂದ ವಜಾಗೊಳಿಸಲಾಗಿತ್ತು. ಆದರೆ ಈ ನಿರ್ಧಾರವು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿತ್ತು.
Advertisement
Advertisement
ತೀವ್ರ ಟೀಕೆಯ ಹಿನ್ನೆಲೆಯಲ್ಲಿ ಕಾರ್ಮಿಕನ ಮತ್ತು ಅವರ ಕುಟುಂಬದವರ ಬೇಡಿಕೆಗಳನ್ನು ಗಮನಿಸಿ ಆ ಸಿಬ್ಬಂದಿಯನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಲಾಗಿದೆ ಎಂದು ಮಥುರಾ-ವೃಂದಾವನ ನಗರ ನಿಗಮದ ಮುನ್ಸಿಪಲ್ ಕಮಿಷನರ್ ಅನುಯ್ಯಾ ಝಾ ತಿಳಿಸಿದ್ದಾರೆ. ಇದನ್ನೂ ಓದಿ: ಕಸದ ಗಾಡಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಫೋಟೋ – ಕೆಲಸದಿಂದ ಪೌರಕಾರ್ಮಿಕ ವಜಾ
Advertisement
ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದ ಪೌರಕಾರ್ಮಿಕ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಕಸದ ತೊಟ್ಟಿಯಲ್ಲಿ ಬಿದ್ದಿತ್ತು. ಹಾಗಾಗಿ ಅವುಗಳನ್ನು ನಾನು ಕಸದ ಗಾಡಿಯಲ್ಲಿ ತುಂಬಿಕೊಂಡು ಹೋಗುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದನು. ಇದನ್ನೂ ಓದಿ: ನಾನು ಕಷ್ಟಕ್ಕೆ ಸ್ಪಂದಿಸಿ ಮನೆಯಲ್ಲಿ ಇಟ್ಕೋತೀನಿ ಅಂದಿದ್ದೆ – ಆದ್ರೆ ನವ್ಯಶ್ರೀ 50ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು: ಟಾಕಳೆ ಆರೋಪ