ಧಾರವಾಡ: ಮಹದಾಯಿಗಾಗಿ ಉತ್ತರ ಕರ್ನಾಟಕದ ಜನತೆ ಒಂದಾಗಿದ್ದು, ಹುಬ್ಬಳ್ಳಿ, ಧಾರವಾಡ, ಗದಗ ಸಂಪೂರ್ಣ ಬಂದ್ ಆಗಿದೆ. ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಬಸ್ ಸಂಚಾರ ಸಂಪೂರ್ಣ ರದ್ದಾಗಿದೆ. ಕೇಂದ್ರ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದು, ಜನಸಾಮನ್ಯರು ಬಸ್‍ಗಳಿಲ್ಲದೆ ಪರದಾಡುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿ ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಪ್ರತಿಭಟನಾಕಾರರು ಭಜನೆ ಮಾಡುತ್ತಾ ನಗರದಲ್ಲೆಡೆ ಸಂಚರಿಸುತ್ತಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ನಗರದ ಚನ್ನಮ್ಮ ವೃತ್ತದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಕಲ್ಲು ತೂರಾಟ ಸಹ ನಡೆದಿದೆ ಎಂದು ತಿಳಿದು ಬಂದಿದೆ.
Advertisement
ಧಾರವಾಡದ ಅಳ್ನಾವರ್ ಹೋಟೆಲ್ ಬಳಿ ಧಾರವಾಡ-ಗೋವಾ ರಸ್ತೆ ಬಂದ್ ಮಾಡಲಾಗಿದೆ. ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾ ಅಧ್ಯಕ್ಷ ಗಿರೀಶ್ ಪೂಜಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದಿಂದ ಗೋವಾದತ್ತ ತೆರಳುತ್ತಿರುವ ವಾಹನಗಳನ್ನು ತಡೆದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ.