ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಫಾಲ್ಸ್‌ನಲ್ಲಿ (VateHole Falls) ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಜಲಪಾತಕ್ಕೆ ಆರು ಜನ ಯುವಕರು ತೆರಳಿದ್ದರು. ಈ ವೇಳೆ ಶಿರಸಿ (Sirsi) ಮೂಲದ ಸುಹಾಸ್ ಶಟ್ಟಿ (22) ಹಾಗೂ ಅಕ್ಷಯ್ ಭಟ್ (22) ಕಾಲುಜಾರಿ ಬಿದ್ದಿದ್ದಾರೆ.
Advertisement
Advertisement
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಆಗಮಿಸಿ ಶೋಧಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.
Advertisement
Advertisement
ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.