Recent News

ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಕಾರು – 6 ಮಂದಿ ಬಚಾವ್

– ಕಾರಿನ ಗಾಜು ಒಡೆದು ಗಾಯಾಳನ್ನು ಆಸ್ಪತ್ರೆಗೆ ಸೇರಿಸಿದ ಸ್ಥಳೀಯರು

ಕಾರವಾರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಆರೂ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಬಾಳೆಗುಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಗೋವಾದಿಂದ ಮುಂಡಗೋಡಿನ ಟಿಬೇಟಿಯನ್ ಕಾಲೋನಿಯ ಕಡೆಗೆ ಕಾರು ಹೋಗುತಿತ್ತು. ಚಾಲಕ ವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ದನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದು, ಹೊರಗೆ ಬರಲು ಸಾಧ್ಯವಾಗದೇ ಚೀರಾಡುತ್ತಿದ್ದರು.

ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಕೆಲ ಸ್ಥಳೀಯರು ಕಾರಿನ ಗಾಜು ಒಡೆದು, ಕಾರಿನಲ್ಲಿದ್ದ ಆರು ಜನರನ್ನು ಹೊರ ತೆಗೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

ಕಾರಿನಲ್ಲಿದ್ದ ಆರು ಜನರಿಗೂ ಚಿಕ್ಕಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Leave a Reply

Your email address will not be published. Required fields are marked *