Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ನಿಮ್ಮ ಹಾಗೆ ಆಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿದ ಉ.ಕನ್ನಡ ಜಿಲ್ಲಾಧಿಕಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ನಿಮ್ಮ ಹಾಗೆ ಆಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿದ ಉ.ಕನ್ನಡ ಜಿಲ್ಲಾಧಿಕಾರಿ

Districts

ನಾನು ನಿಮ್ಮ ಹಾಗೆ ಆಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿದ ಉ.ಕನ್ನಡ ಜಿಲ್ಲಾಧಿಕಾರಿ

Public TV
Last updated: March 7, 2025 7:57 pm
Public TV
Share
2 Min Read
uttara kannada dc priya
SHARE

ಕಾರವಾರ: ನಾನು ನಿಮ್ಮ ಹಾಗೆ ಜಿಲ್ಲಾಧಿಕಾರಿಯಾಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ (Uttara Kannada DC) ಕೆ.ಲಕ್ಷ್ಮೀ ಪ್ರಿಯಾ ಅವರು ಪ್ರೇರಣೆ ನೀಡಿದ್ದಾರೆ.

ಪ್ರತಿಯೊಬ್ಬರಿಗೂ ಜೀವನದಲ್ಲಿ ತಮ್ಮದೇ ಆದ ಗುರಿ ಮತ್ತು ಕನಸುಗಳಿರುತ್ತವೆ. ಅವುಗಳನ್ನು ನನಸು ಮಾಡಿಕೊಳ್ಳಲು ಸತತ ಪರಿಶ್ರಮಪಟ್ಟರೂ ಹಲವು ಬಾರಿ ಅವುಗಳ ಸಮೀಪ ತೆರಳಿ ನಿರೀಕ್ಷಿತ ಸಾಧನೆಯಿಂದ ವಿಮುಖರಾಗುವ ಸಾಧ್ಯತೆಗಳೇ ಹೆಚ್ಚು. ಆದರೆ ತನ್ನ ಗುರಿಯ ಆಶಯ ಹೇಳಿಕೊಂಡ ವಿದ್ಯಾರ್ಥಿನಿಗೆ ಕೂಡಲೇ ಸ್ವತ: ಅದರ ಅನುಭವವನ್ನು ನೀಡಿ, ಆಕೆ ಕಂಡಿರುವ ಕನಸಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುವ ಮೂಲಕ ವಿದ್ಯಾರ್ಥಿನಿಯ ಭವಿಷ್ಯದ ಕನಸನ್ನು ನನಸು ಮಾಡುವ ಅಪರೂಪದ ಗಳಿಗೆಗೆ ಜಿಲ್ಲಾಧಿಕಾರಿ ಸಾಕ್ಷಿಯಾಗಿದ್ದಾರೆ.ಇದನ್ನೂ ಓದಿ: ನಟಿ ವೈಜಯಂತಿ ಮಾಲಾ ಆರಾಮಾಗಿದ್ದಾರೆ: ಸಾವಿನ ವದಂತಿಗೆ ತೆರೆ ಎಳೆದ ಪುತ್ರ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ವಿಚಾರಗೋಷ್ಠಿ ಕಾರ್ಯಾಗಾರ ಉದ್ಘಾಟನೆಗೆ ಆಗಮಿಸಿದ್ದ, ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್, ಬಾಡ ಗ್ರಾಮದ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಲು ಉತ್ಸುಕತೆಯಿಂದ ಅವರ ಕಚೇರಿಯ ಕೊಠಡಿಗೆ ತೆರಳಿದರು.

ವಿದ್ಯಾರ್ಥಿನಿಯರೊಂದಿಗೆ ಅವರ ವಿದ್ಯಾಭ್ಯಾಸದ ಬಗ್ಗೆ ಮತ್ತು ಆರೋಗ್ಯದ ಕುರಿತು ವಿಚಾರಿಸಿದ ಜಿಲ್ಲಾಧಿಕಾರಿ ವಿದ್ಯಾಭ್ಯಾಸದ ನಂತರ ಮುಂದೆ ಏನಾಗಬೇಕು ಎಂದು ಕೊಂಡಿದ್ದೀರಿ ಎಂದು ವಿಚಾರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು, ಡಾಕ್ಟರ್, ಲಾಯರ್, ಇಂಜಿನಿಯರ್ ಆಗುವ ಮತ್ತು ನೌಕಾಪಡೆ ಸೇರುವ ಬಗ್ಗೆ ತಿಳಿಸಿದರು. ಆದರೆ ಅದರಲ್ಲಿದ್ದ ಯಲ್ಲಾಪುರದ 8ನೇ ತರಗತಿ ವಿದ್ಯಾರ್ಥಿನಿ ಸುದೀಪ್ತ ಶಂಕರ್ ಅತ್ತರವಾಲ್ ಮಾತ್ರ ನಾನು ನಿಮ್ಮ ಹಾಗೆ ಡಿಸಿ ಆಗಬೇಕು, ಅದಕ್ಕೆ ಏನು ಓದಬೇಕು ಎಂದು ಜಿಲ್ಲಾಧಿಕಾರಿಗಳನ್ನೇ ಪ್ರಶ್ನಿಸಿದರು. ಯಾವ ಕಾರಣಕ್ಕೆ ಡಿಸಿ ಆಗಬೇಕು ಎಂಬ ಜಿಲ್ಲಾಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿನಿ, ಸಮಾಜದಲ್ಲಿ ಎಲ್ಲರಿಗೂ ನ್ಯಾಯ ದೊರಕಿಸಬೇಕು, ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕು ಆದ್ದರಿಂದ ಡಿಸಿ ಆಗಬೇಕು ಎಂದರು. ಬಾಲಕಿಯ ಪ್ರಶ್ನೆ ಮತ್ತು ಉತ್ತರದಿಂದ ಅಚ್ಚರಿಗೊಂಡ ಜಿಲ್ಲಾಧಿಕಾರಿಗಳು, ನೀನು ಇನ್ನೂ ಚಿಕ್ಕವಳಿದ್ದೀಯಾ ಈಗಿನಿಂದಲೇ ಚೆನ್ನಾಗಿ ಓದು, ದಿನಪತ್ರಿಕೆಗಳನ್ನು ಓದಿ ಹೆಚ್ಚಿನ ಸಾಮಾನ್ಯ ಜ್ಞಾನ ಬೆಳಸಿಕೊಳ್ಳಬೇಕು, ಪದವಿ ಶಿಕ್ಷಣದ ನಂತರ ಯುಪಿಎಸ್‌ಸಿ ಪರೀಕ್ಷೆಗೆ ಅಗತ್ಯ ತರಬೇತಿ ಪಡೆದು, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಆಗ ಡಿಸಿ ಆಗುತ್ತಿಯಾ, ಇದಕ್ಕಾಗಿ ನಿರಂತರವಾಗಿ ಶ್ರಮ ಪಡಬೇಕು ಎಂದರು.

ಜಿಲ್ಲಾಧಿಕಾರಿಯಾಗುವ ನಿನ್ನ ಕನಸನ್ನು ನನಸು ಮಾಡಿಕೊಳ್ಳಲು ಯಾವುದೇ ಸಂದರ್ಭದಲ್ಲೂ ಗುರಿಯಿಂದ ಮತ್ತು ನಿರ್ಧಾರಗಳಿಂದ ಹಿಂದೆ ಸರಿಯದಂತೆ ವಿದ್ಯಾರ್ಥಿನಿಗೆ ಕಿವಿಮಾತುಗಳನ್ನು ಹೇಳಿ, ನಿನ್ನ ಕನಸಿಗೆ ನನ್ನಿಂದ ಈಗಿನಿಂದಲೇ ಪ್ರೇರಣೆ ಸಿಗಲಿ ಎಂದು ತಾವು ಕುಳಿತಿದ್ದ ಕುರ್ಚಿಯಿಂದ ಕೆಳಗಿಳಿದು ವಿದ್ಯಾರ್ಥಿಯನ್ನು ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಕೂರಿಸಿದರು.

ಇತರ ವಿದ್ಯಾರ್ಥಿಗಳ ಜೊತೆ ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಕುಳಿತಿದ್ದ ಬಾಲಕಿಯ ಹಿಂದೆ ನಿಂತ ಜಿಲ್ಲಾಧಿಕಾರಿಗಳು ಫೋಟೋ ತೆಗೆಸಿಕೊಂಡು, ಮುಂದೆ ನಿಜವಾಗಿಯೂ ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಆಸಿನವಾಗುವಂತಾಗಲಿ ಎಂದು ಹಾರೈಸಿ, ಇತರೆ ವಿದ್ಯಾರ್ಥಿಗಳಿಗೂ ತಮ್ಮ ಗುರಿ ಸಾಧನೆಗೆ ಸತತವಾಗಿ ಪ್ರಯತ್ನಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಕುಳಿತು ನಿಜಕ್ಕೂ ಪ್ರೌಡ್ ಫೀಲಿಂಗ್ ಆಯ್ತು, ನಾನೂ ಜಿಲ್ಲಾಧಿಕಾರಿ ಆಗಿಯೇ ಆಗ್ತೀನಿ ಎಂಬ ದೃಢ ನಿರ್ಧಾರ ಮಾಡಿದ್ದೇನೆ ಎಂದು ಸುದೀಪ್ತ ಶಂಕರ್ ಅತ್ತರವಾಲ್ ಖುಷಿಯಿಂದ ಹೇಳಿಕೊಂಡರು.ಇದನ್ನೂ ಓದಿ: ಭಾನುವಾರ ನೇರಳೆ ಮಾರ್ಗದ ಮೆಟ್ರೋದಲ್ಲಿ 3 ಗಂಟೆಗಳ ಕಾಲ ಸಂಚಾರ ರದ್ದು – ಎಲ್ಲೆಲ್ಲಿ ಸ್ಥಗಿತ?

TAGGED:K Lakshmi PriyaUttara KannadaUttara Kannada DCಉತ್ತರ ಕನ್ನಡಕೆ.ಲಕ್ಷ್ಮೀ ಪ್ರಿಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

infosys employee dies after drowning in cauvery river
Districts

ಕಾವೇರಿ ನದಿಯಲ್ಲಿ ಮುಳುಗಿ ಇನ್ಫೋಸಿಸ್ ಉದ್ಯೋಗಿ ಸಾವು

Public TV
By Public TV
15 minutes ago
Sameer MD 2
Bengaluru City

ದೂತ ಎಂಡಿ ಸಮೀರ್‌ಗೆ ಹೈಕೋರ್ಟ್ ಫುಲ್ ಕ್ಲಾಸ್

Public TV
By Public TV
24 minutes ago
sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
50 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
58 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
1 hour ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?