ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ನಾಲ್ಕು ಜನರಲ್ಲಿ ಮಂಗನ ಕಾಯಿಲೆ (KFD) ಪತ್ತೆಯಾಗಿದೆ.
ಶಿರಸಿ (Sirsi) ತಾಲೂಕಿನ ಹೆಗಡೆಕಟ್ಟದ ರೇವಣಕಟ್ಟದ, ಸಿದ್ದಾಪುರ ತಾಲೂಕಿನ ಕಾನಸೂರಿನಲ್ಲಿ ತಲಾ ಒಬ್ಬರಿಗೆ ಹಾಗೂ ಹೊನ್ನಾವರದ ಜನಕಡಕಲ್‍ನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಸಿದ್ದಾಪುರದ ಕಾನಸೂರಿನಲ್ಲಿ 14 ವರ್ಷದ ಬಾಲಕನಲ್ಲಿ ಸೋಂಕು ಪತ್ತೆಯಾಗಿದ್ದು, ಶಿರಸಿಯ ರೇವಣಕಟ್ಟಾದಲ್ಲಿ 58 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನೂ ಹೊನ್ನಾವರದ ಇಬ್ಬರು ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಮಂಗನ ಕಾಯಿಲೆಗೆ ಲಸಿಕೆ: ಐಸಿಎಂಆರ್ ಮಹಾನಿರ್ದೇಶಕರ ಜೊತೆ ದಿನೇಶ್ ಗುಂಡೂರಾವ್ ಚರ್ಚೆ
ಬಿಸಿಲಿನ ಪ್ರಮಾಣ ಹೆಚ್ಚಾದ ಕಾರಣ ಸೋಂಕಿನ ಪ್ರಮಾಣದಲ್ಲೂ ಹೆಚ್ಚಳವಾಗುತ್ತಿದೆ. ಕೆಎಫ್‍ಡಿ ತಡೆಗೆ ರೈತರು ಕಾಡಿಗೆ ತೆರಳದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Raichur | ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಸ್ಫೋಟ – ಓರ್ವ ಸಾವು, ಇನ್ನೋರ್ವ ಗಂಭೀರ