ಕಾರವಾರ: ಗೋವು ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದವರಿಗೆ ಗ್ರಾಮಸ್ಥರು ಥಳಿಸಿ ಪೊಲೀಸರ ವಶಕ್ಕೆ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮುಗಳಿ ಗ್ರಾಮದಲ್ಲಿ ನಡೆದಿದೆ.
ನಾಲ್ವರು ಯುವಕರು ಕಾರಿನಲ್ಲಿ ಬಂದು ಗೋವು ಕದಿಯಲು ಯತ್ನಿಸಿದ್ದರು. ಈ ವೇಳೆ ಗ್ರಾಮಸ್ಥರ ಕೈಗೆ ನಾಲ್ವರೂ ಕಾರು ಸಮೇತ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಆರೋಪಿಗಳು ಕಾರನ್ನು ಬಿಟ್ಟು ಪರಾರಿಯಾಗಲು ಯತ್ನಿಸಿದ್ದರು. ತಕ್ಷಣವೇ ಯುವಕರನ್ನು ಸುತ್ತುವರಿದ ಗ್ರಾಮಸ್ಥರು ಹಿಡಿದು ಥಳಿಸಿದ್ದಾರೆ.
ಗ್ರಾಮದ ಕೆಲ ಯುವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಗೆ ಆರೋಪಿಗಳನ್ನು ಒಪ್ಪಿಸಿದರು. ಈ ಸಂಬಂಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.