ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ 766 ರ ದೇವಿಮನೆ ಘಾಟ್(Devimane Ghat) ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ(Rain) ಮತ್ತೆ ಗುಡ್ಡ ಕುಸಿದ ಘಟನೆ ನಡೆದಿದೆ.
ರಾತ್ರಿಯಿಂದ ಮುಂಜಾನೆಯವರೆಗೆ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಹೆದ್ದಾರಿಯ ಒಂದು ಬದಿಯ ಗುಡ್ಡದ ಮಣ್ಣು ರಸ್ತೆಗೆ ಕುಸಿದುಬಿದ್ದಿದೆ. ಪರಿಣಾಮವಾಗಿ ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ.
ಕೆಲವು ತಿಂಗಳ ಹಿಂದೆಯಷ್ಟೇ ಇದೇ ದೇವಿಮನೆ ಘಟ್ಟ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಇದೀಗ ಮುಂಗಾರು ಮಳೆ ಚುರುಕಾಗುತ್ತಿದ್ದಂತೆ ಘಟ್ಟದ ಭಾಗದಲ್ಲಿ ಮತ್ತೆ ಸರಣಿ ಭೂಕುಸಿತಗಳು ಆರಂಭವಾಗಿದ್ದು, ಸಂಚಾರಕ್ಕೆ ಅಡ್ಡಿಯಾಗುವ ಭೀತಿ ಎದುರಾಗಿದೆ. ಇದನ್ನೂ ಓದಿ: ಆಟವಾಡುತ್ತಾ ಕೀ ಆನ್ ಮಾಡಿದ ಮಗು – ಟ್ರ್ಯಾಕ್ಟರ್ ಮೈಮೇಲೆ ಹರಿದು ತಂದೆ ದಾರುಣ ಸಾವು

