ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಆರೋಪಿ ಅಜಾದ್ ಅಣ್ಣಿಗೇರಿಗೆ ಬಿಜೆಪಿ ಸರ್ಕಾರ ನೀಡಿದ್ದ ವಕ್ಫ್ ಬೋರ್ಡ್‍ನ ಜಿಲ್ಲಾ ಉಪಾಧ್ಯಕ್ಷ ಸ್ಥಾನ ರದ್ದುಗೊಂಡಿದೆ.
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಎ1 ಆರೋಪಿಯಾಗಿದ್ದ ಅಜಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ನೀಡಿದ ಬಳಿಕ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದಲ್ಲದೆ ಕುದ್ದು ಕರಾವಳಿ ಭಾಗದ ಶಾಸಕರು ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಯ್ಕೆ ವಿರುದ್ಧ ಅಪಸ್ವರ ಕೇಳಿ ಬಂದ ಹಿನ್ನೆಲೆ ರಾಜ್ಯ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಂದು ಈ ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದ ಆರೋಪಿಗೆ ಬಿಜೆಪಿ ಸರ್ಕಾರದಿಂದ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ
2017ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಕರಾವಳಿಯಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿ ಬರಲು ಕಾರಣವಾದ ಪರೇಶ್ ಮೇಸ್ತಾ ಘಟನೆ ಬಿಜೆಪಿಗೆ ರಾಜ್ಯದಲ್ಲಿ ಅತೀ ಹೆಚ್ಚು ಮತ ಬರಲು ಕಾರಣವಾಗಿತ್ತು. ಹಿಂದುತ್ವದ ಹೆಸರು ಹೇಳಿಕೊಂಡು ಪರೇಶ್ ಮೇಸ್ತಾ ಸಾವಿಗೆ ಕಾರಣರಾದವರನ್ನು ಶಿಕ್ಷಿಸುತ್ತೇವೆ ಎಂದು ಹೇಳಿಕೊಂಡಿದ್ದ ಬಿಜೆಪಿ ಆ ಬಳಿಕ ಇದೀಗ ಪರೇಶ್ ಮೇಸ್ತಾ ಪ್ರಕರಣದಲ್ಲಿ ಆರೋಪಿಯಾದವನಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನವನ್ನು ನೀಡಿತ್ತು. ಪರೇಶ್ ಮೇಸ್ತಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಅಜಾದ್ ಅಣ್ಣಿಗೇರಿಗೆ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ನೀಡಿದ ಬಳಿಕ ಬಿಜೆಪಿ ಮುಖಂಡರ ಕಣ್ಣು ಕೆಂಪಗಾಗಿಸಿತ್ತು. ಇದನ್ನೂ ಓದಿ: ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕು – ಬಿಜೆಪಿ ಟೀಕಿಸೋ ಭರದಲ್ಲಿ ಪ್ರಿಯಾಂಕ್ ಖರ್ಗೆ ವಿವಾದ
ಸಚಿವೆ ಶಶಿಕಲಾ ಜೊಲ್ಲೆಯಿಂದ ಆಯ್ಕೆ:
ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಆರೋಪಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಕುದ್ದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಜಾದ್ ಅಣ್ಣಿಗೇರಿಯನ್ನು ಆಯ್ಕೆ ಮಾಡಿದ್ದರು. ಆಯ್ಕೆ ಬಳಿಕ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ವಕ್ಫ್ ಬೋರ್ಡ್ ಪದಾಧಿಕಾರಿಗಳನ್ನು ಬದಲಿಸುವಂತೆ ಸಚಿವರಿಗೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೊಹಮ್ಮದ್ ಅನೀಸ್ ಪತ್ರ ಬರೆದಿದ್ದರು. ಇದೀಗ ಆದೇಶಕ್ಕೆ ತಡೆ ನೀಡಲಾಗಿದೆ.