ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು (Rain), ಮಂಗಳವಾರ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ (School) ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆ ಮುನ್ಸೂಚನೆ
ಜಿಲ್ಲೆಯ ಈ 8 ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಸಂಪೂರ್ಣ ಬಂದ್