ಕಾರವಾರ: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ಗಳ ಮೂಲಕ ಪ್ರಸಿದ್ಧಿ ಪಡೆದಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೆರೆಹೊಸಳ್ಳಿಯ ಲಕ್ಷ್ಮಿ ನಾಯ್ಕ (93) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಸರಿಯಾಗಿ ಕಿವಿ ಕೇಳಿಸದಿದ್ದರೂ, ಕಣ್ಣು ಮಂಜಾಗಿದ್ದರೂ ತಮ್ಮ ಮರಿಮೊಮ್ಮಗ ಡ್ರಾಮಾ ಜ್ಯೂನಿಯರ್ಸ್ ಖ್ಯಾತಿಯ ಸೂರಜ್ ಆಚಾರಿ ಹೇಳಿಕೊಟ್ಟಂತೆ ನಟನೆ ಮಾಡುತ್ತಲೇ ಫೇಮಸ್ ಆಗಿದ್ದರು. ಆ ವಯಸ್ಸಿನಲ್ಲೂ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಮುಗ್ಧ ನಟನೆ ಮೂಲಕ ಅವರು ಹೆಸರು ಗಳಿಸಿದ್ದರು.

ಜನರ ಅಚ್ಚುಮೆಚ್ಚಿನ ರೀಲ್ಸ್ ಅಜ್ಜಿ
ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಜನಪ್ರಿಯರಾಗಿದ್ದಾರೆ ಅಂದ್ರೆ ಸೂರಜ್ ಯಾವ ರೀಲ್ಸ್ ಹಾಕಿದರೂ ಅದರಲ್ಲಿ ಅಜ್ಜಿ ಯಾಕಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದರು. ಅಷ್ಟರ ಮಟ್ಟಿಗೆ ಈ ಅಜ್ಜಿಯನ್ನು ಜನರು ಇಷ್ಟಪಡುತ್ತಿದ್ದರು.
ಮರಿಮೊಮ್ಮಗ ಡ್ರಾಮಾ ಜೂನಿಯರ್ಸ್ ಸೂರಜ್ ಜೊತೆ ನೂರಾರು ಕಾಮಿಡಿ ರಿಲ್ಸ್ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್ ಅಜ್ಜಿ’ ಎಂದೇ ಮನೆ ಮಾತಾಗಿದ್ದರು.
ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅವರು ಅಗಲಿದ್ದಾರೆ. ಇಂದು (ಮಾ.29) ಯಲ್ಲಾಪುರದಲ್ಲಿ ಧಾರ್ಮಿಕ ವಿಧಿ ಪ್ರಕಾರ ಅವರ ಅಂತ್ಯಕ್ರಿಯೆ ನೆರವೇರಿತು.

