ಡೆಹ್ರಾಡೂನ್: ರಿಸೆಪ್ಷನಿಸ್ಟ್ ಕೊಲೆ ಪ್ರಕರಣದ ಆರೋಪಿ ಆಗಿರುವ ಉತ್ತರಾಖಂಡದ ಋಷಿಕೇಶದಲ್ಲಿರವ ಬಿಜೆಪಿ (BJP) ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ವನತಾರಾ ರೆಸಾರ್ಟ್‌ನ್ನು (Resort) ಧ್ವಂಸಗೊಳಿಸಲಾಗಿದೆ.
ಉತ್ತರಾಖಂಡದ (Uttarakhand) ಮುಖ್ಯಮಂತ್ರಿ ಪುಷ್ಕರ್ ಧಾಮಿ ರೆಸಾರ್ಟ್ ಧ್ವಂಸಕ್ಕೆ (Demolish) ಆದೇಶಿಸಿದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ನೀಡಿದ್ದ ಆದೇಶದ ಮೇರೆಗೆ ರೆಸಾರ್ಟ್ ಕೆಡವುವ ಕಾರ್ಯ ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.
#WATCH | Uttarakhand: Demolition underway on orders of CM PS Dhami, at the Vanatara Resort in Rishikesh owned by Pulkit Arya who allegedly murdered Ankita Bhandari: Abhinav Kumar, Special Principal Secretary to the CM
(Earlier visuals) pic.twitter.com/8iklpWw0y6
— ANI (@ANI) September 24, 2022
ಉತ್ತರಾಖಂಡದ ಪೌರಿ ಜಿಲ್ಲೆಯ ಋಷಿಕೇಶ ಬಳಿಯ ರೆಸಾರ್ಟ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯನನ್ನು ಬಂಧಿಸಲಾಗಿದೆ. ಆಕೆಯ ಹತ್ಯೆಗೆ ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು.
ಯುವತಿ ಕಾಣೆಯಾಗಿದ್ದಾಳೆ ಎಂದು ಆಕೆ ಕುಟುಂಬದವರಂತೆ ಪೊಲೀಸ್ ಠಾಣೆಯಲ್ಲಿ ಪುಲ್ಕಿತ್ ಆರ್ಯ ದೂರು ದಾಖಲಿಸಿದ್ದರು. ಮೃತದೇಹವು ರೆಸಾರ್ಟ್‌ನ ನೀರಿನ ಕೊಳದಲ್ಲಿ ಪತ್ತೆಯಾಗಿದೆ. ರೆಸಾರ್ಟ್ ಬಳಿಯ ನೀರಿನ ಚಾನಲ್‌ನಲ್ಲಿ ಹುಡುಕಾಟ ನಡೆಯುತ್ತಿದೆ. ಆರೋಪಿಯ ತಂದೆ ಆಡಳಿತಾರೂಢ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೆ ಸೇರಿದವರಾಗಿದ್ದು, ಪ್ರಕರಣದಲ್ಲಿ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡ್ತಿದ್ದ ಯುವತಿ ಹತ್ಯೆ – ಬಿಜೆಪಿ ಮಾಜಿ ಸಚಿವನ ಪುತ್ರ ಅರೆಸ್ಟ್
ನಿನ್ನೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಕರಣವನ್ನು ನಮಗೆ ವರ್ಗಾಯಿಸಿದೆ. ನಾವು ಅದನ್ನು 24 ಗಂಟೆಗಳಲ್ಲಿ ಪರಿಹರಿಸಿದ್ದೇವೆ. ರೆಸಾರ್ಟ್ ಮಾಲೀಕ ಮತ್ತು ಇತರ ಇಬ್ಬರು ಆರೋಪಿಗಳು ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿದಾಗ ಪ್ರತಿಭಟನಾನಿರತ ಸ್ಥಳೀಯರು ಪೊಲೀಸರ ವಾಹನವನ್ನು ಸುತ್ತುವರಿದರು. ಅಲ್ಲದೇ ಪೊಲೀಸರ ಮೇಲೆ ಹಲ್ಲೆ ನಡೆಸಲು ಕೂಡ ಮುಂದಾದರು. ಇದನ್ನೂ ಓದಿ: 5 ದಿನ ನಾಪತ್ತೆಯಾಗಿದ್ದ ಯುವತಿ ರೆಸಾರ್ಟ್‌ನಲ್ಲಿ ಶವವಾಗಿ ಪತ್ತೆ- ಕಾಂಗ್ರೆಸ್ ಆರೋಪವೇನು?
ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದು ಅತ್ಯಂತ ದುಃಖಕರ ಘಟನೆ, ಘೋರ ಅಪರಾಧ. ಪೊಲೀಸರು ಬಂಧನಕ್ಕೆ ಸಂಬಂಧಿಸಿದಂತೆ ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ. ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಅಪರಾಧಿ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭರವಸೆ ನೀಡಿದ್ದಾರೆ.