ಡೆಹ್ರಾಡೂನ್: ಭೂಮಿ ಖರೀದಿಸಲು ಸಹಾಯ ಕೋರಿ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ (Rishabh Pant) ಮಾಡಿದ್ದ ಮನವಿಗೆ ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಪ್ರತಿಕ್ರಿಯಿಸಿದ್ದಾರೆ.
ಶುಕ್ರವಾರ (ಆ.7) ಮಧ್ಯರಾತ್ರಿ ರಿಷಭ್ ಪಂತ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಉತ್ತರಾಖಂಡದಲ್ಲಿ ಮನೆ ಕಟ್ಟಲು ಭೂಮಿ ಕೊಡಿಸಿ ಎಂದು ಮನವಿ ಮಾಡಿ, ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಟ್ಯಾಗ್ ಮಾಡಿದ್ದರು. ಇದಕ್ಕೆ ಸಿಎಂ ಪುಷ್ಕರ್ ಧಾಮಿ ಪ್ರತಿಕ್ರಿಯಿಸಿದ್ದು, ನಿಯಮದ ಪ್ರಕಾರವೇ ಈ ಕೆಲಸ ಮಾಡಿಕೊಟ್ಟು, ಪಂತ್ ಅವರಿಗೆ ಎಲ್ಲಾ ರೀತಿಯ ಸಹಾಯ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದು ಮರ್ಸಿಡಿಸ್ ಕಾರು ಚಲಾಯಿಸಿದ ಪೊಲೀಸ್ ಅಧಿಕಾರಿ ಪುತ್ರ; ಅಪಘಾತಕ್ಕೆ ವೃದ್ಧೆ ಬಲಿ
प्रिय ऋषभ, आप उत्तराखण्ड के गौरव हैं। आपने अपने शानदार खेल और उपलब्धियों से देश-दुनिया में देवभूमि का नाम रोशन किया है। अपनी मातृभूमि के प्रति आपका यह प्रेम और यहां वापस आकर योगदान देने की भावना अत्यंत सराहनीय है।
आपके द्वारा उठाए गए विषय के संबंध में संबंधित अधिकारियों को… https://t.co/v3iFQVpxUK
— Pushkar Singh Dhami (@pushkardhami) August 8, 2026
ಪಂತ್ ಮನವಿಗೆ ಸಿಎಂ ಪ್ರತಿಕ್ರಿಯೆ:
ನೀವು ಉತ್ತರಾಖಂಡದ ಹೆಮ್ಮೆ. ನಿಮ್ಮ ಅದ್ಭುತ ಆಟ ಮತ್ತು ಸಾಧನೆಗಳಿಂದ ನೀವು ದೇಶ ಹಾಗೂ ಜಗತ್ತಿನಲ್ಲಿ ದೇವಭೂಮಿಯ ಹೆಸರನ್ನು ಬೆಳಗಿದ್ದೀರಿ. ನಿಮ್ಮ ತಾಯ್ನಾಡಿನ ಮೇಲಿನ ಪ್ರೀತಿ ಮತ್ತು ಇಲ್ಲಿಗೆ ಮರಳುವ ನಿಮ್ಮ ಭಾವನೆ ಅತ್ಯಂತ ಶ್ಲಾಘನೀಯ.
ನೀವು ಪ್ರಸ್ತಾಪಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಅವರು ಶೀಘ್ರದಲ್ಲೇ ನಿಮ್ಮನ್ನು ಸಂಪರ್ಕಿಸಿ, ನಿಯಮಗಳ ಪ್ರಕಾರ ನಿಮಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯವನ್ನು ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
A gift would be lovey for representation out states at the highest level internationally stages but if you allow me I wanna buy it fromGovernment and on there rates at least I can have my first house built in my own state and our state please be helpful. Seriously didn’t know…
— Rishabh Pant (@RishabhPant17) August 7, 2026
ಪಂತ್‌ನಲ್ಲಿ ಪೋಸ್ಟ್‌ನಲ್ಲಿ ಏನಿದೆ?
ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಜ್ಯವನ್ನು ಪ್ರತಿನಿಧಿಸಿದ್ದಕ್ಕೆ ಉಡುಗೊರೆಯಾಗಿ ಜಾಗ ಸಿಕ್ಕರೆ ಚೆನ್ನಾಗಿರುತ್ತೆ, ಆದರೆ ನಿಮಗೆ ಒಪ್ಪಿಗೆಯಿದ್ದರೆ ನಾನು ಅದನ್ನು ಸರ್ಕಾರ ನಿಗದಿಪಡಿಸಿರುವ ದರಕ್ಕೆ ಖರೀದಿಸಲು ಬಯಸುತ್ತೇನೆ. ಹೇಗಾದರೂ ಮಾಡಿ ನನ್ನ ಸ್ವಂತ ರಾಜ್ಯದಲ್ಲಿ ನನ್ನ ಮೊದಲನೆಯ ಮನೆ ಕಟ್ಟಿಕೊಳ್ಳಬೇಕು, ದಯವಿಟ್ಟು ಸಹಾಯ ಮಾಡಿ. ಆದರೆ ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ನಮಗೆ ನಿಮ್ಮ ಮೇಲೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅಗತ್ಯವಿದೆ – ʻಕಾಕ್ರೋಚ್ʼ ಪ್ರತಿಭಟನೆ ಬಳಿಕ ಜೆನ್-ಝಿ ಉದ್ದೇಶಿಸಿ ಪ್ರಧಾನಿಯ ಮೊದಲ ಭಾಷಣ



