ಡೆಹ್ರಾಡೂನ್: ಉತ್ತರಾಖಂಡದ (Uttarakhand) ಹೋಟೆಲ್‌ವೊಂದರಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ (Kolkatta) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ.
ಪ್ರಾಧ್ಯಾಪಕರನ್ನು ಮೈನಕ್ ಪಾಲ್ (44) ಎಂದು ಗುರುತಿಸಲಾಗಿದೆ. ಫಿಲಾಸಫಿ ವಿಭಾಗದ ಪ್ರೊಫೆಸರ್ ಮೈನಾಕ್ ಪಾಲ್ ಅವರ ಶವ ನ.8 ರಂದು ವಾಶ್ ರೂಂನಲ್ಲಿ ಪತ್ತೆಯಾಗಿದೆ. ಕುತ್ತಿಗೆ ಮತ್ತು ಕೈಗಳ ಮೇಲೆ ಗಾಯವಾಗಿತ್ತು. ಪ್ರಾಥಮಿಕ ವರದಿ ಪ್ರಕಾರ, ಮೈನಕ್ ಪಾಲ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!
ಶಿಕ್ಷಕ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪಾರ್ಥ ಪ್ರತಿಮ್ ರಾಯ್ ಮಾತನಾಡಿ, ಮೈನಕ್ ಪಾಲ್ ಅವರ ಸಾವಿನ ಸುದ್ದಿ ಕೇಳಿದಾಗಿನಿಂದ ನಾವು ತೀವ್ರ ಆಘಾತಕ್ಕೆ ಒಳಗಾಗಿದ್ದೇವೆ. ಪಾಲ್ ಅವರು ಪ್ರೀತಿಯ ವ್ಯಕ್ತಿಯಾಗಿದ್ದರು. ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಶಿಕ್ಷಕರಾಗಿ ಮತ್ತು ಸಂಶೋಧಕರಾಗಿ ಮೈನಕ್ ಪಾಲ್ ಉತ್ತಮ ಸೇವೆ ಸಲ್ಲಿಸಿದ್ದಾರೆ, ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ