ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಅರಣ್ಯ ಸಚಿವ ಹರಕ್ ಸಿಂಗ್ ರಾವತ್ ಸಂಪುಟದಿಂದ ವಜಾಗೊಳಿಸಿದ್ರೆ, ಇನ್ನೊಂದೆಡೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ‘ಕೈ’ ಬಿಟ್ಟು ‘ಕಮಲ’ ಮುಡಿಯಲು ಮುಂದಾಗಿದ್ದಾರೆ.
Advertisement
ನೈನಿತಾಲ್ ನ ಮಾಜಿ ಶಾಸಕಿ ಸರಿತಾ ಆರ್ಯ ಅವರು ಇಂದು ಬಿಜೆಪಿಗೆ ಸೇರಿದ್ದಾರೆ. ಡೆಹ್ರಾಡೂನ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ಸರಿತಾ ಬಿಜೆಪಿ ಸೇರಿದ್ದಾರೆ. ಈ ವೇಳೆ ಪಕ್ಷದ ಅಧ್ಯಕ್ಷ ಮದನ್ ಕೌಶಿಕ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ- ಫೆ.20ರಂದು ಮತದಾನ
Advertisement
Advertisement
ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸರಿತಾ ಅವರು ಉತ್ಸುಕರಾಗಿದ್ದರು. ಅಲ್ಲದೆ ನೈನಿತಾಲ್ ಕ್ಷೇತ್ರದಿಂದ ಟಿಕೆಟ್ ಪಡೆಯಬೇಕೆಂಬುದು ಅವರ ಮಹದಾಸೆಯಾಗಿತ್ತು. ಆದರೆ ಕಾಂಗ್ರೆಸ್ ಪಕ್ಷದಿಂದ ಅವರನ್ನು ಕಣಕ್ಕಿಳಿಸುವುದು ಅನುಮಾನವಾಗಿತ್ತು. ಈ ಹಿನ್ನೆಲೆಯಲ್ಲಿ ಸರಿತಾ ಬೇಸರಗೊಂಡಿದ್ದು, ಇದೀಗ ಭಾರತೀಯ ಜನತಾ ಪಕ್ಷದತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರ ಸಮಸ್ಯೆ ಬಿಜೆಪಿಗೆ ಅರ್ಥವಾಗಲ್ಲ: ಹರಕ್ ಸಿಂಗ್ ರಾವತ್ ಕಣ್ಣೀರು
Advertisement
2017ರ ವಿಧಾನಸಭಾ ಚುನಾವಣೆಯಲ್ಲಿ ಸಂಜೀವ್ ಆರ್ಯ ಅವರು ಬಿಜೆಪಿ ಟಿಕೆಟ್ ಪಡೆದು ಸ್ಪರ್ಧಿಸಿದ್ದರು. ಆದರೆ ಅವರು ಆ ಸಂದರ್ಭದಲ್ಲಿ ಸೋತಿದ್ದರು. ಸದ್ಯ ಸಂಜೀವ್ ಕಾಂಗ್ರೆಸ್‍ನಲ್ಲಿದ್ದಾರೆ.